ಮಂಗಳವಾರ, ಜೂನ್ 15, 2021
25 °C

ಚುನಾವಣೆ ಫಲಿತಾಂಶಕ್ಕೆ ಮೊದಲೇ ಕಾಂಗ್ರೆಸ್ ಅಭ್ಯರ್ಥಿ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ರಾಮನಗರ: ಇಲ್ಲಿನ ನಗರಸಭೆ ಚುನಾವಣೆಯಲ್ಲಿ 4ನೇ ವಾರ್ಡಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲೀಲಾ ಗೋವಿಂದರಾಜು (42) ಕೋವಿಡ್ ಸೋಂಕಿನಿಂದ ನಿಧನರಾದರು.

ವಾರದ ಹಿಂದೆ ಚುನಾವಣೆ ಪ್ರಚಾರದ ಸಂದರ್ಭವೇ ಅವರಿಗೆ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಬೆಳಿಗ್ಗೆ ಮೃತಪಟ್ಟರು.

ಇದೇ ತಿಂಗಳ 27ರಂದು ರಾಮನಗರ ನಗರಸಭೆ ಚುನಾವಣೆ ನಡೆದಿದ್ದು, 30ರಂದು ಮತ ಎಣಿಕೆ ನಡೆಯಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು