ಭಾನುವಾರ, ಆಗಸ್ಟ್ 14, 2022
26 °C

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾಂಗ್ರೆಸ್‌ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಕೇಂದ್ರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ವಿರುದ್ಧ ತಿಪ್ಪಸಂದ್ರದಲ್ಲಿ ಕಾಂಗ್ರೆಸ್‌ ‍ಪಕ್ಷದಿಂದ ಸಾಂಕೇತಿಕ ಪ್ರತಿಭಟನೆ ನಡೆಯಿತು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್‌. ಕುಮಾರ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಡವರ ಪರವಾಗಿ ಆಡಳಿತ ನಡೆಸುತ್ತಿಲ್ಲ. ಆರ್‌.ಎಸ್‌.ಎಸ್‌. ಮುಖಂಡರ ಸಲಹೆಯಂತೆ ಸಿರಿವಂತರ ಪರವಾಗಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

ರಾವಣನ ದೇಶ ಶ್ರೀಲಂಕಾದಲ್ಲಿ ಪೆಟ್ರೋಲ್‌ ಲೀಟರ್‌ಗೆ ₹ 50 ಇದೆ. ಶ್ರೀರಾಮನ ರಾಷ್ಟ್ರದಲ್ಲಿ ಲೀಟರ್‌ ಪೆಟ್ರೋಲ್‌ ₹ 100 ದಾಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಬಲಿ ಪಡೆದಿವೆ ಎಂದು ದೂರಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಎಸ್‌. ಗಂಗಾಧರ್ ಮಾತನಾಡಿ, ಕೊರೊನಾ ಸಂಕಟಕ್ಕೆ ಸಿಲುಕಿದ ಜನಗಳಿಗೆ ಸೂಕ್ತ ಸವಲತ್ತು ಒದಗಿಸಿಲ್ಲ. ಲಕ್ಷಾಂತರ ಜನರ ಸಾವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರಣವಾಗಿವೆ. ಬೆಡ್ ದಂಧೆಯಲ್ಲಿಯೇ ಬಿಜೆಪಿ ಶಾಸಕರು ಬಡಿದಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇಂಧನ ಬೆಲೆ ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಇದರಿಂದ ಎಲ್ಲ ವರ್ಗದವರು ತೊಂದರೆಗೆ ಸಿಲುಕಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಕಾರ್ಯಕರ್ತರು
ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.