ಮಾಗಡಿ: ‘ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಧಾನಸಭಾ ಚುನಾವಣೆ ಸಂಬಂಧ ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸಲಾಗುವುದು’ ಎಂದು ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ತಿಳಿಸಿದರು.

ತಾಲ್ಲೂಕಿನ ಚಿಕ್ಕಮುದುಗೆರೆ ಗ್ರಾಮದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಅವಲೋಕನ ನಡೆಯುತ್ತಿದೆ. ಇದಕ್ಕೆ ಕಾರಣ ಹುಡುಕಲು ಪ್ರತಿಯೊಂದು ಬೂತ್ನಲ್ಲಿ ಚರ್ಚೆ ನಡೆಯಲಿದೆ. ಪಕ್ಷ ಸಂಘಟನೆಗಾಗಿ ಚಿಂತನ ಮಂಥನ ಶಿಬಿರ ನಡೆಯಲಿದೆ ಎಂದರು.

‘ಕಳೆದ ಬಾರಿ ನನ್ನ ವಿರುದ್ಧ ಮತ ನೀಡಿದವರಿಂದಲೇ ಮತಗಳ ಪ್ರಮಾಣ ಹೆಚ್ಚಿಸಲು ಚರ್ಚೆ ಮಾಡಿದ್ದೇವೆ. ಚುನಾವಣೆಯಲ್ಲಿ ನಾನು ಸೋತರು ಸಹ ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಪ್ರತಿ ವಾರ ಸಭೆ ಕರೆದು ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು’ ಎಂದು ತಿಳಿಸಿದರು.

‘ನಮ್ಮಲ್ಲೂ ಕೂಡ ಸಣ್ಣಪುಟ್ಟ ಗೊಂದಲಗಳಿವೆ. ಈ ಗೊಂದಲ ಸರಿಪಡಿಸುವ ಕೆಲಸ ಮಾಡುತ್ತಿದ್ದೇನೆ. ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಕೆ. ಧನಂಜಯ, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಚ್. ಶಿವರಾಜ್, ರವೀಶ್, ರಾಜಣ್ಣ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.