ಗುರುವಾರ , ಜನವರಿ 27, 2022
27 °C

ಪಾದಯಾತ್ರೆ: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ರಾಮನಗರ ಪ್ರವೇಶಿಸಿದ್ದು, ಇದೇ 13, 14ರಂದು ಬೆಂಗಳೂರು - ಮೈಸೂರು ಹೆದ್ದಾರಿ ಮಾರ್ಗದಲ್ಲಿ ಸಾಗಲಿದೆ.

 ಈ‌ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿದೆ.

ಈ ಪಾದಯಾತ್ರೆಯು ಬೆಂಗಳೂರು ನಗರ ತಲುಪುವವರೆಗೂ ಮೈಸೂರು, ಚಾಮರಾಜನಗರ, ಮಡಿಕೇರಿ ಕಡೆಯಿಂದ ಬೆಂಗಳೂರು ಕಡೆಗೆ, ಬೆಂಗಳೂರು ಕಡೆಯಿಂದ ಮೈಸೂರು, ಚಾಮರಾಜನಗರ, ಮಡಿಕೇರಿ ಕಡೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲಿರುವ ಎಲ್ಲಾ ಮಾದರಿಯ ವಾಹನಗಳ ಸವಾರರು ರಾಷ್ಟ್ರೀಯ ಹೆದ್ದಾರಿಯ ಮುಖಾಂತರ ಸಂಚರಿಸುವುದನ್ನು‌‌ ನಿರ್ಬಂಧಿಸಲಾಗಿದೆ.

ಇದಕ್ಕೆ ಪರ್ಯಾಯವಾಗಿ ಮೈಸೂರು-ಬನ್ನೂರು ಕಿರುಗಾವಲು- ಮಳವಳ್ಳಿ- ಹಲಗೂರು- ಸಾತನೂರು-ಕನಕಪುರ -ಹಾರೋಹಳ್ಳಿ -ಕಗ್ಗಲೀಪುರ- ಬನಶಂಕರಿ- ಸಾರಕ್ಕಿ ಮಾರ್ಗವಾಗಿ ಸಂಚರಿಸಬಹುದು. ಅಥವಾ ಮೈಸೂರು- ಶ್ರೀರಂಗಪಟ್ಟಣ- ಪಾಂಡವಪುರ- ನಾಗಮಂಗಲ- ಬೆಳ್ಳೂರುಕ್ರಾಸ್- ಕುಣಿಗಲ್ ನೆಲಮಂಗಲ ಮಾರ್ಗವಾಗಿ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ...

ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ

ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್ ಆದೇಶ ಪಾಲಿಸಲು ಸಿದ್ಧ: ಸಿದ್ದರಾಮಯ್ಯ

ಕಾಂಗ್ರೆಸ್‌ ಸೋಮಾರಿತನದಿಂದ ಮೇಕೆದಾಟು ಯೋಜನೆ ವಿಳಂಬ: ಸಾಹಿತಿ ದೊಡ್ಡರಂಗೇಗೌಡ

ಪಾದಯಾತ್ರೆ ಕೊರೊನಾ ಯಾತ್ರೆ ಆದೀತು: ಆರಗ ಎಚ್ಚರಿಕೆ

ಇಂತಹ ಕೇಸ್‌ಗಳಿಗೆಲ್ಲ ನಾವು ಹೆದರುವುದಿಲ್ಲ: ಸಿದ್ದರಾಮಯ್ಯ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು