ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ಗೆ ಅವಮಾನ: ಕಾಂಗ್ರೆಸ್‌ ಪ್ರತಿಭಟನೆ

ಉಮಾಶಂಕರ್‌, ಸುರೇಶ್‌ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯ
Last Updated 14 ನವೆಂಬರ್ 2019, 13:25 IST
ಅಕ್ಷರ ಗಾತ್ರ

ರಾಮನಗರ: ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ ಶಿಕ್ಷಣ ಇಲಾಖೆಯು ‘ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ’ ಎಂದು ಉಲ್ಲೇಖಿಸುವ ಮೂಲಕ ಅಂಬೇಡ್ಕರ್ ಅವರಿಗೆ ಅಗೌರವ ತೋರಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.

ಐಜೂರು ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕರರು, ಶಿಕ್ಷಣ ಇಲಾಖೆ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಶಿಕ್ಷಣ ಸಚಿವ ಸುರೇಶ್‌ಕುಮಾರ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡುವ ಮತ್ತು ತಳ ಸಮುದಾಯವನ್ನು ಅವಮಾನಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಒಳಸಂಚು ನಡೆಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾಶಂಕರ್ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಮಾತನಾಡಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಪಕ್ಷದ ಜಿಲ್ಲಾ ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ರಾಂಪುರ ನಾಗೇಶ್ ಆಗ್ರಹಿಸಿದರು.

ಅಂಬೇಡ್ಕರ್ ಅವರಿಗೆ ಅಗೌರವ ತೋರುವ ಕೆಲಸ ಮಾಡಿರುವ ಉಮಾಶಂಕರ್ ಅವರನ್ನು ಸೇವೆಯಿಂದ ವಜಾ ಮಾಡಬೇಕು, ಸಚಿವ ಸುರೇಶ್‌ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಇಬ್ಬರ ವಿರುದ್ಧ ಪೊಲೀಸ್ ಇಲಾಖೆ ಸ್ವ ಇಚ್ಛೆಯಿಂದ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು. ಇಲ್ಲವಾದರೆ ಪಕ್ಷದಿಂದ ಹೋರಾಟವನ್ನು ತೀವ್ರಗೊಳಿಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹಿರಿಯ ಮುಖಂಡ ಶಿವಕುಮಾರಸ್ವಾಮಿ ಮಾತನಾಡಿ ಸಾಮೂಹಿಕ ಹೊಣೆಗಾರಿಕೆಯಿಂದ ರಚನೆಯಾದ ಸಂವಿಧಾನ ಎಂದು ಹೇಳುವ ಮೂಲಕ ಇತಿಹಾಸ ತಿರುಚುವ ಹುನ್ನಾರ ನಡೆಸಿದ್ದಾರೆ. ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಅವರಿಗೆ ಈ ಎಲ್ಲ ವಿಚಾರ ಗೊತ್ತಿದ್ದರೂ ಜಾಣಕುರುಡು ಪ್ರದರ್ಶಿಸುವ ಮೂಲಕ ಜಾರಿಕೊಳ್ಳುವ ಯತ್ನ ಮಾಡಿದ್ದಾರೆ. ಉಮಾಶಂಕರ್ ಅವರನ್ನು ಮತ್ತು ಸರ್ಕಾರದ ಪ್ರೌಢ ಶಿಕ್ಷಣ ಆಯುಕ್ತರನ್ನು ಅವರ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಕಾವ್ಯಾ, ಶಿವಶಂಕರ್, ಶ್ರೀನಿವಾಸ್, ವೆಂಕಟಸ್ವಾಮಿ, ಶಿವಲಿಂಗಯ್ಯ, ಕೋಟೆ ಕುಮಾರ್, ಶಿವಲಿಂಗಯ್ಯ, ಶ್ರೀನಿವಾಸ್ ಚನ್ನಮಾನಹಳ್ಳಿ, ಪ್ರಕಾಶ್, ವಿ. ರಾಜು, ಗುಡ್ಡೆ ವೆಂಕಟೇಶ್, ಲೋಕೇಶ್, ಧನಂಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT