ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಸಂವಿಧಾನ ದಿನಾಚರಣೆ

Published 30 ನವೆಂಬರ್ 2023, 7:43 IST
Last Updated 30 ನವೆಂಬರ್ 2023, 7:43 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಅಗಲಕೋಟೆ ಹ್ಯಾಂಡ್‌ ಪೋಸ್ಟ್‌ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ತಾಲ್ಲೂಕು ಕಾನೂನು ಸೇವೆ ಸಮಿತಿ ಮತ್ತು ವಕೀಲರ ಸಂಘ, ಹುಲಿಕಟ್ಟೆ ಎಚ್‌.ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು.

ತಾಲ್ಲೂಕು ಕಾನೂನು ಸೇವೆ ಸಮಿತಿ ಅಧ್ಯಕ್ಷ ಹಾಗೂ ಪ್ರಧಾನ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶರಾದ ಜೀವನ್‌ರಾವ್‌ ವಸಂತ ರಾವ್‌ ಕುಲಕರ್ಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂವಿಧಾನ ಪ್ರಸ್ತಾವ ಬೋಧಿಸಿದ ನ್ಯಾಯಾಧೀಶರು, ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಸಂವಿಧಾನ ಅಧ್ಯಯನ ಅಗತ್ಯ ಎಂದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಸವರಾಜು.ಬಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಚ್‌.ಜಿ.ಚನ್ನಪ್ಪ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಗೋವಿಂದರಾಜು, ಉಪನ್ಯಾಸಕರಾದ ಸಿದ್ದರಾಜು, ಮಹಂತೇಶ್‌ ಬೆಟಗೇರಿ, ಶುಭಾ, ಶಿವಣ್ಣ, ಚಿತ್ರಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮೂರ್ತಿ ಹಾಗೂ ಕಾಲೇಜಿನ ಸಿಬ್ಬಂದಿ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT