ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಸಂವಿಧಾನ ಜಾಗೃತಿ ಜಾಥಾ

Published 9 ಫೆಬ್ರುವರಿ 2024, 5:55 IST
Last Updated 9 ಫೆಬ್ರುವರಿ 2024, 5:55 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿ ತಲುಪಿದ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧ ಚಿತ್ರಕ್ಕೆ ಗ್ರಾ.ಪಂ.ಅಧ್ಯಕ್ಷ ಶಿವಕುಮಾರ್‌ ಹಾಗೂ ಸದಸ್ಯರು ಸ್ವಾಗತ ಕೋರಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಾಡಬಾಳ್‌ ಜಯರಾಮ್‌ ಮಾತನಾಡಿ, ಭಾರತದ ಸಂವಿಧಾನ ಮತ್ತು ಡಾ.ಬಿ.ಆರ್‌.ಅಂಬೇಡ್ಕರ್‌ ಬಗ್ಗೆ ವಿಶೇಷವಾಗಿ ಅಧ್ಯಯನ ನಡೆಸಬೇಕು. ಸಂವಿಧಾನ ಸಮಾಜದ ಎಲ್ಲರಿಗೂ ಅವಕಾಶ ನೀಡಿದೆ ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಂದನಾ, ಪಿಡಿಒ ಉಮೇಶ್‌ ನಾಯ್ಕ್‌, ಕಾರ್ಯದರ್ಶಿ ಕೆ.ವೇಣುಗೋಪಾಲ್‌, ಗ್ರಾಮ ಲೆಕ್ಕಾಧಿಕಾರಿ ಕಲ್ಪನಾ ಸಂವಿಧಾನ ಜಾಗೃತಿ ಜಾಥಾ ಬಗ್ಗೆ ಮಾತನಾಡಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT