ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

Last Updated 20 ಅಕ್ಟೋಬರ್ 2019, 13:25 IST
ಅಕ್ಷರ ಗಾತ್ರ

ಮಾಗಡಿ: ‘ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನಬಾರ್ಡ್‌ ವತಿಯಿಂದ ₹ 93 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಿಸಲಾಗುವುದು’ ಎಂದು ಶಾಸಕ ಎ. ಮಂಜುನಾಥ ತಿಳಿಸಿದರು.

ಕಲ್ಲೂರು ಗ್ರಾಮದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೊಡ್ಡಮಸ್ಕಲ್ ಗ್ರಾಮದಲ್ಲಿ ₹ 15 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಲಾಗುವುದು. ಅಂದಿನ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವರಾಗಿದ್ದ ಎಚ್. ಡಿ. ರೇವಣ್ಣ, ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರು ತಾಲ್ಲೂಕಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ’ ಎಂದು ಹೇಳಿದರು.

‘ಅನುದಾನದಲ್ಲಿ ತಾಲ್ಲೂಕಿನ ಅಬಿವೃದ್ಧಿ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ₹ 25 ಕೋಟಿ ಅನುದಾನ ನಿಲ್ಲಿಸಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಸಿದ್ದೇನೆ. ಸಚಿವರು ಸ್ಪಂದಿಸಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಚಂದ್ರಮ್ಮ ನಂಜಯ್ಯ ಮಾತನಾಡಿ, ‘ತಾಲ್ಲೂಕಿನಲ್ಲಿ ನಡೆಯುತ್ತಿರುವ ಸರ್ಕಾರಿ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿಯನ್ನು ಲೋಕೋಪಯೋಗಿ ಇಲಾಖೆ ಮತ್ತು ಇತರೆ ಇಲಾಖೆಗಳ ಅಧಿಕಾರಿಗಳು ಸರಿಯಾಗಿ ನೀಡುತ್ತಿಲ್ಲ’ ಎಂದರು

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯ್ಕ್‌, ಸಮಾಜ ಸೇವಕಿ ಶೈಲಜಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ಅಶೋಕ್, ಪಿಡಿಒ ಕಾಂತರಾಜು, ಕಾರ್ಯದರ್ಶಿ ರಾಮಚಂದ್ರಪ್ಪ, ಸದಸ್ಯರಾದ ಸೇವಾ ನಾಯಕ್, ಮಂಜುನಾಥ್, ಮಂಜಣ್ಣ, ನಾಗರಾಜ್, ಬುಡ್ಡಣ್ಣ, ಗೋವಿಂದಪ್ಪ, ಎಇಇ ರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT