ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರು ಕಾನೂನು ಅರಿಯಲಿ: ನ್ಯಾ.ಹುಲುವಾಡಿ ಜಿ.ರಮೇಶ್

ಗ್ರಾಹಕ ಸಂರಕ್ಷಣೆ ಕಾಯ್ದೆ ಕಾರ್ಯಕ್ರಮ
Published 29 ಡಿಸೆಂಬರ್ 2023, 7:16 IST
Last Updated 29 ಡಿಸೆಂಬರ್ 2023, 7:16 IST
ಅಕ್ಷರ ಗಾತ್ರ

ಚನ್ನಪಟ್ಟಣ: ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನು ಜಾರಿಗೆ ತಂದಿದೆ. ಪ್ರತಿಯೊಬ್ಬರು ಕಾನೂನು ತಿಳಿದುಕೊಳ್ಳುವುದು ಅವಶ್ಯ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಕಿವಿಮಾತು ಹೇಳಿದರು.‌

ನಗರದ ಶತಮಾನೋತ್ಸವ ಭವನದಲ್ಲಿ ಗ್ರಾಹಕ ಸಂರಕ್ಷಣೆ ಕಾಯ್ದೆ 2019ರ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಹಕರಿಗೆ ಹಕ್ಕುಗಳ ಅರಿವಿನ ಮಹತ್ವ ಮನವರಿಕೆ ಮಾಡಿಕೊಡುವ ಸಲುವಾಗಿ ರಾಷ್ಟ್ರೀಯ ಗ್ರಾಹಕ ದಿನ ಆಚರಿಸಲಾಗುತ್ತಿದೆ. ಗ್ರಾಹಕರು ತಾವು ಖರೀದಿಸಿದ ವಸ್ತು, ಸೇವೆ ಗುಣಮಟ್ಟ ಖಚಿತಪಡಿಸಿಕೊಳ್ಳಬೇಕು. ಖರೀದಿಸಿದ ವಸ್ತುವಿನ ಬಿಲ್ ಕಡ್ಡಾಯವಾಗಿ ಪಡೆಯಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ಎಚ್ಚರ ವಹಿಸುವುದು ಅತ್ಯವಶ್ಯ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಮಾತನಾಡಿ, ದಿನನಿತ್ಯ ಜೀವನಕ್ಕೆ ಅಗತ್ಯ ವಸ್ತು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಗ್ರಾಹಕರು ಎಷ್ಟೇ ಜಾಗೃತರಾಗಿದ್ದರೂ ಒಂದೊಮ್ಮೆ ಮೋಸ ಹೋಗುವುದು ಸಹಜ. ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕ ತನಗಾದ ನಷ್ಟ ಹಿಂಪಡೆಯಲು ಗ್ರಾಹಕ ವೇದಿಕೆಗೆ ಲಿಖಿತ ರೂಪದಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ರಾಮನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್.ಚನ್ನೇಗೌಡ, ಗ್ರಾಹಕರ ಹಕ್ಕು ಸಮಸ್ಯೆಗಳ ಕುರಿತು ಮಾತನಾಡಿ, ಗ್ರಾಹಕರಿಗೆ ಅನಗತ್ಯವಾಗಿ ವಂಚಿಸುವ ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್‌ಲೈನ್ ನಲ್ಲಿ ಖರೀದಿಸುವಾಗ ಎಚ್ಚರ ಅವಶ್ಯ. ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣ ಕೂಡ ನಡೆಯುತ್ತಿವೆ ಎಂದರು.

ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯೆ ರೇಣುಕಾದೇವಿ ದೇಶಪಾಂಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯ್ ಕುಮಾರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಉಪನಿರ್ದೇಶಕಿ ಸಿ.ಆರ್.ರಮ್ಯ, ತಹಶೀಲ್ದಾರ್ ಎ.ಎಚ್.ಮಹೇಂದ್ರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಹಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT