ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಚನಬೆಲೆ ಜಲಾಶಯಕ್ಕೆ ಕಲುಷಿತ ನೀರು: ಕ್ರಮಕ್ಕೆ ಒತ್ತಾಯ

Last Updated 1 ಏಪ್ರಿಲ್ 2019, 14:28 IST
ಅಕ್ಷರ ಗಾತ್ರ

ಮಾಗಡಿ: ಕುಡಿಯುವ ನೀರು ಒದಗಿಸುವ ಮಂಚನಬೆಲೆ ಜಲಾಶಯಕ್ಕೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯದರ್ಶಿ ನೆಸೆಪಾಳ್ಯ ಮಂಜುನಾಥ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿಪ್ಪಗೊಂಡನಹಳ್ಳಿ ಜಲಾಶಯ ಹೂಳು ತೆಗೆಯಲು ಬಹುಕೋಟಿ ಯೋಜನೆ ಸಿದ್ಧಪಡಿಸಲಾಗಿದೆ. ಹೆಸರಘಟ್ಟ, ನೆಲಮಂಗಲದ ಕೈಗಾರಿಕೆಗಳಿಂದ ಹರಿದು ಬರುವ ತ್ಯಾಜ್ಯದ ನೀರು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಸೇರಿ ಕಲುಷಿತಗೊಳ್ಳುತ್ತಿದೆ. ಇದೇ ನೀರನ್ನು ಮಂಚನಬೆಲೆ ಜಲಾಶಯಕ್ಕೆ ತುಂಬಿಸಲಾಗುತ್ತಿದೆ. ಪಟ್ಟಣದ ಜನರಿಗೆ ಮಂಚನಬೆಲೆ ಜಲಾಶಯದ ನೀರು ಬಿಟ್ಟರೆ ಕುಡಿಯುವ ನೀರಿಗೆ ಬೇರೆ ಮಾರ್ಗವಿಲ್ಲ ಎಂದು ದೂರಿದರು.

ಕಲುಷಿತ ನೀರು ಕುಡಿದು ಹಲವರು ಸಾಂಕ್ರಾಮಿಕ ರೋಗಗಳಿಂದ ಬಳುತ್ತಿದ್ದಾರೆ. ಈ ಕುರಿತು ಶಾಸಕ ಎ.ಮಂಜುನಾಥ್‌, ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT