ರಾಮನಗರ: 7ರಂದು ಸಂವಾದ ಕಾರ್ಯಕ್ರಮ

ಕನಕಪುರ: ಮೈಸೂರಿನ ಆಹಾರ ವಿಜ್ಞಾನಿ ಡಾ.ಖಾದರ್ ವಾಲಿ ಅವರೊಂದಿಗೆ ‘ಆರೋಗ್ಯವೇ ಭಾಗ್ಯ’ ಎಂಬ ವಿಷಯ ಕುರಿತು ನ. 7ರಂದು ಬೆಳಿಗ್ಗೆ 9.30ರಿಂದ ಸಂವಾದ ಕಾರ್ಯಕ್ರಮವು ಹಾರೋಹಳ್ಳಿ ಚಾಮುಂಡೇಶ್ವರಿ ಬಡಾವಣೆಯ ಡೇರಿ ರಸ್ತೆಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ನಡೆಯಲಿದೆ.
ಸಿರಿಧಾನ್ಯಗಳ ಬಳಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಬಗೆ, ಮಧುಮೇಹ, ಕ್ಯಾನ್ಸರ್, ರಕ್ತದೊತ್ತಡ, ಹೃದಯ ಮತ್ತು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ, ಮೂಳೆ, ಕೀಲು ಸೆಳೆತ ಮತ್ತು ನೋವು, ಥೈರಾಯ್ಡ್, ಆಸ್ತಮ ಇತ್ಯಾದಿ ರೋಗಗಳ ಬಗ್ಗೆ ಸಂವಾದದ ಮೂಲಕ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಳ್ಳಬಹುದಾಗಿದೆ.
ಸಾರ್ವಜನಿಕವಾಗಿ ನಡೆಯುವ ಈ ಸಂವಾದದಲ್ಲಿ ಸಾರ್ವಜನಿಕರು ಪಾಲ್ಗೊಂಡು ಆರೋಗ್ಯ ಸಮಸ್ಯೆ, ಆಹಾರ ಪದ್ಧತಿ ಹಾಗೂ ಸಿರಿಧಾನ್ಯಗಳ ಬಳಕೆ, ಬೆಳೆಯುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹಾರೋಹಳ್ಳಿ ಪ್ರಗತಿ ವಿದ್ಯಾನಿಕೇತನ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಕಟಣೆ ಕೋರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.