ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ನಿಷೇಧಕ್ಕೆ ಸಹಕಾರ ಅಗತ್ಯ- ಅನಿತಾ ಕುಮಾರಸ್ವಾಮಿ

Last Updated 9 ಮಾರ್ಚ್ 2022, 6:42 IST
ಅಕ್ಷರ ಗಾತ್ರ

ರಾಮನಗರ: ಬಾಲ್ಯವಿವಾಹವು ಅನಿಷ್ಠ ಪದ್ಧತಿಯಾಗಿದ್ದು, ಇದನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಂಗಳವಾರ ನಡೆದ ವಿಡಿಯೊ ಆನ್ ವೀಲ್ಸ್ ವಾಹನದ ಮೂಲಕ ಬಾಲ್ಯವಿವಾಹ ನಿಷೇಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

18 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡುವುದು ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಶಿಕ್ಷಾರ್ಹ ಅಪರಾಧ. ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ತೊಂದರೆಯಾಗುತ್ತದೆ. ಬಾಲ್ಯವಿವಾಹ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಜಿ.ಪಂ. ಉಪ ಕಾರ್ಯದರ್ಶಿ ರಮೇಶ್, ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗವೇಣಿ ಉಪಸ್ಥಿತರಿದ್ದರು.

ಬಾಲ್ಯವಿವಾಹ ನಿಷೇಧ ಅಭಿಯಾನವು ಇದೇ 25ರ ವರೆಗೆ ನಡೆಯಲಿದ್ದು, ಸಂಚಾರಿ ರಥವು ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT