ಪ್ರಜಾವಾಣಿ ವಾರ್ತೆ

ರಾಮನಗರ: ಬೆಂಗಳೂರು ಸಹಕಾರ ತರಬೇತಿ ಸಂಸ್ಥೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ನಲ್ಲಿ 2026ರ ಜನವರಿಯಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರಾರಂಭಿಸಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಠ ಎಸ್ಎಸ್ಎಲ್ಸಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿರುತ್ತದೆ.

ಪ್ರವೇಶ ಪಡೆಯುವ ಎಲ್ಲಾ ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ ತಿಂಗಳಿಗೆ ₹500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ₹600 ಶಿಷ್ಯವೇತನ ನೀಡಲಾಗುವುದು. ಪುರುಷರಿಗೆ ವಸತಿ (ಹಾಸ್ಟೆಲ್) ಸೌಲಭ್ಯ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿದೆ.

ಅರ್ಜಿ ದೊರೆಯುವ ಸ್ಥಳ: ಕೆಐಸಿಎಂ, 1/3, ಎರಡನೇ ಮಹಡಿ, 3ನೇ ಮುಖ್ಯರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಮಕ್ಕಳ ಕೂಟ ಹತ್ತಿರ, ಚಾಮರಾಜಪೇಟೆ, ಬೆಂಗಳೂರು– 560018. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-35541407, 9449007661, 9036256781 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.