ಸೋಮವಾರ, ಜುಲೈ 26, 2021
26 °C

ಕೊರೊನಾ: ಜಾಗೃತಿ ಮೂಡಿಸುವುದು ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ‘ಕೊರೊನಾ ಜೊತೆಯಲ್ಲಿಯೆ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ಭಯಪಟ್ಟು ಕೂರುವ ಬದಲು ಜಾಗೃತರಾಗುವುದು ಅವಶ್ಯಕವಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಗಣಪತಿ ಭಟ್ ಸಲಹೆ ನೀಡಿದರು.

ಪಟ್ಟಣದ ಪೇಟೆಚೇರಿಯ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ಸಂಸ್ಥೆಯ ವತಿಯಿಂದ ಈಚೆಗೆ ನಡೆದ ಕೊರೊನಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕೊರೊನಾ ವೈರಸ್ ಅತ್ಯಂತ ಶೀಘ್ರದಲ್ಲಿ ಮತ್ತು ಬಹಳ ಸುಲಭವಾಗಿ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಮುಖ್ಯವಾಗಿದೆ’  ಎಂದರು.

ಎಲ್ಲರೂ ಸ್ವ ಉದ್ಯೋಗವನ್ನು ಕೈಗೊಳ್ಳಬೇಕು. ಸ್ವಾವಲಂಬಿ ಭಾರತ ನಿರ್ಮಾಣ ಮಾಡಬೇಕು. ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ತಾಜಾ, ಬಿಸಿಯಾದ, ಜೀರ್ಣಕ್ಕೆ ಸುಲಭವಾದ ಲಭ್ಯವಿರುವ ತರಕಾರಿಗಳನ್ನು ಸೇವಿಸುವುದು ಒಳಿತು. ಅಂತರ ಕಾಪಾಡಿಕೊಳ್ಳುವ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. 

ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ, ಅಧ್ಯಕ್ಷೆ ಅಂಬಿಕಾ ಅಧ್ಯಕ್ಷತೆ ವಹಿಸಿದ್ದರು. ಆಶಾ ಕಾರ್ಯಕರ್ತೆ ಮೆಹರಾಜ್ ಹಾಗೂ ಆರೋಗ್ಯ ಸಹಾಯಕಿ ರಾಧಾ ಅವರನ್ನು ಸನ್ಮಾನಿಸಲಾಯಿತು. ಸೇವಾ ಪ್ರತಿನಿಧಿ ಆಯಿಷಾ ಸುಲ್ತಾನ್ ಮತ್ತಿತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.