ಭಾನುವಾರ, ಏಪ್ರಿಲ್ 5, 2020
19 °C

52 ಮಂದಿ ಮೇಲೆ ನಿಗಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯಲ್ಲಿ ಈವರೆಗೆ ವಿದೇಶಗಳಿಂದ ಬಂದ 134 ಮಂದಿಯ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದ್ದು, ಯಾರಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿಲ್ಲ.

ವಿದೇಶಗಳಿಂದ ಬಂದವರಲ್ಲಿ ಈಗಾಗಲೇ 96 ಮಂದಿ 14 ದಿನಗಳ ಹೋಮ್ ಕ್ವಾರಂಟೈನ್ ಅನ್ನು ಪೂರೈಸಿದ್ದಾರೆ. ಇವರಲ್ಲಿ 17 ಮಂದಿ ಗುರುವಾರವಷ್ಟೇ ಈ ಅವಧಿ ಪೂರ್ಣಗೊಳಿಸಿದ್ದಾರೆ. 9 ಮಂದಿ 28 ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. 14 ಮಂದಿ ನಿಗಾ ಅವಧಿ ಪೂರ್ಣಗೊಳಿಸಿ ಜಿಲ್ಲೆ ಬಿಟ್ಟು ತೆರಳಿದ್ದಾರೆ. ಪ್ರಸ್ತುತ 52 ಮಂದಿ ಹೋಮ್‌ ಕ್ವಾರಂಟೈನ್‌ನಲ್ಲಿ ಇದ್ದಾರೆ.

ಸೋಂಕಿನ ಲಕ್ಷಣ ಕಾಣಿಸಿಕೊಂಡ ಮೂರು ಮಂದಿಯ ಗಂಟಲ ದ್ರವದ ಪರೀಕ್ಷೆ ನಡೆಸಿದ್ದು, ಯಾರೊಬ್ಬರಲ್ಲೂ ಸೋಂಕು ಇರುವುದು ಧೃಡಪಟ್ಟಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು