ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಗಮಗಳು ಸುಲಿಗೆ ಕೇಂದ್ರಗಳಾಗಬಾರದು: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Published 11 ಜುಲೈ 2024, 0:01 IST
Last Updated 11 ಜುಲೈ 2024, 0:01 IST
ಅಕ್ಷರ ಗಾತ್ರ

ರಾಮನಗರ: ‘ಸರ್ಕಾರದ ನಿಗಮ– ಮಂಡಳಿಗಳು ಆಯಾ ಸಮುದಾಯಗಳ ಸುಧಾರಣಾ ಕೇಂದ್ರಗಳಾಗಬೇಕೆ ಹೊರತು, ಸುಲಿಗೆ ಕೇಂದ್ರಗಳಾಗಬಾರದು. ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಮೇಲಕ್ಕೆತ್ತುವ ಉದ್ದೇಶದಿಂದ ಈ ನಿಗಮಗಳು ಸ್ಥಾಪನೆಯಾಗಿವೆ ಎಂಬುದನ್ನು ಮರೆಯಬಾರದು’ ಎಂದು ಭೋವಿ ಗುರುಪೀಠದ ಪೀಠಾಧ್ಯಕ್ಷ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

‘ಸಮುದಾಯಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ನಿಗಮಗಳು ಹಾಗೂ ಮಂಡಳಿಗಳಲ್ಲಿ ಹಣವು ದುರುಪಯೋಗವಾಗದಂತೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕು. ಇಲ್ಲದಿದ್ದರೆ, ವಾಲ್ಮೀಕಿ ನಿಗಮದಲ್ಲಾದಂತೆ ಹಣವು ದುರುಪಯೋಗವಾಗುತ್ತದೆ. ಇದರಿಂದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT