ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಷತ್‌ ಚುನಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ: ಉದಯ್ ಸಿಂಗ್ ಆರೋಪ

ಕಾಂಗ್ರೆಸ್‌, ಬಿಜೆಪಿ ವಿರುದ್ಧ ಸ್ವತಂತ್ರ ಅಭ್ಯರ್ಥಿ ಉದಯ್ ಸಿಂಗ್ ಆರೋಪ
Published 27 ಮೇ 2024, 6:17 IST
Last Updated 27 ಮೇ 2024, 6:17 IST
ಅಕ್ಷರ ಗಾತ್ರ

ಕನಕಪುರ: ಪದವೀಧರರ ಮತ ಪಡೆದು ಗೆದ್ದು ವಿಧಾನಪರಿಷತ್‌ಗೆ ಆಯ್ಕೆಯಾಗುವ ಸದಸ್ಯರು ಪದವೀಧರರ ಹಿತರಕ್ಷಣೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪದವೀಧರರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ‌ ಎಂದು ಬೆಂಗಳೂರು ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಆರ್.ಎಸ್.ಉದಯ್ ಸಿಂಗ್ ಆರೋಪಿಸಿದರು.

ಇಲ್ಲಿನ ರೋಟರಿ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ‌ತನ್ನ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಮತದಾರರಿಗೆ ಆಮಿಷ ಒಡ್ಡುವ ಮೂಲಕ ಚುನಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್‌ನ ರಾಮೋಜಿಗೌಡ, ಗಿಫ್ಟ್‌ಗಳನ್ನು ಕೊಡುವ ಮೂಲಕ ಪದವೀಧರ ಕ್ಷೇತ್ರವನ್ನು ಭ್ರಷ್ಟಾಚಾರಗೊಳಿಸಲು ಹೊರಟಿದ್ದಾರೆಂದು ಆರೋಪಿಸಿದರು.

ಬಿಜೆಪಿಯ ಆ.ದೇವೇಗೌಡ ಪದವೀಧರರ ಪರವಾಗಿ ಯಾವ ಪ್ರಶ್ನೆಯನ್ನು ಸದನದಲ್ಲಿ ಕೇಳಿಲ್ಲ. ಈಗ ಮತ್ತೆ ತಮ್ಮನ್ನು ಮರು ಆಯ್ಕೆ ಮಾಡುವಂತೆ ಪದವೀಧರರನ್ನು ಒತ್ತಾಯಿಸುವ ಮೂಲಕ ಮರು ಆಯ್ಕೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.

ಪದವೀಧರರು ಸರಿಯಾದ ಉದ್ಯೋಗವಿಲ್ಲದೆ, ಗುತ್ತಿಗೆ ಆಧಾರದ ಮೇಲೆ ಅತ್ಯಂತ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ. ಇವರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲವಾಗಿದೆ ಎಂದರು.

ಸಿಂಡಿಕೇಟ್ ಮಾಜಿ ಸದಸ್ಯ ಶಿವಣ್ಣ ಮಾತನಾಡಿ, ಪದವೀಧರ ಮತಗಳನ್ನು ಪಡೆದು ಆಯ್ಕೆಯಾದ ಶಾಸಕರು ಪದವೀಧರರ ಪರವಾಗಿ ಕೆಲಸ ಮಾಡದೆ ಕೇವಲ ಅಧಿಕಾರಕ್ಕಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಪದವೀಧರ ಕ್ಷೇತ್ರವನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರದ ಬೆಂಬಲವೂ ಇದೆ ಎಂದು ಆರೋಪಿಸಿದರು.

ಮಾಜಿ ಸೈನಿಕರ ಅಸೋಸಿಯೇಷನ್ ಕಾರ್ಯದರ್ಶಿ ವಿಮಲೇಶ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT