ರಾಮನಗರ: ‘ಆತ್ಮಹತ್ಯೆ ಮಾಡಿಕೊಳ್ಳುವವರು ಅನುಭವಿಸುವ ಒತ್ತಡ ಹಾಗೂ ಮಾನಸಿಕ ತುಮುಲಗಳಿಗೆ ಸಕಾಲದಲ್ಲಿ ಸೂಕ್ತವಾದ ಆಪ್ತ ಸಮಾಲೋಚನೆ ಸಿಕ್ಕರೆ, ಅಂತಹವರು ಆತ್ಮಹತ್ಯೆಯಂತಹ ಆಲೋಚನೆಗಳಿಂದ ಹೊರಗೆ ಬರುತ್ತಾರೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ಮೋಲ್ ಜೈನ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುರಕ್ಷಾ ಯೋಜನೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ‘ಗೇಟ್-ಕೀಪರ್ ತರಬೇತಿ: ಆತ್ಮಹತ್ಯೆ ತಡೆಗಟ್ಟುವುದರಲ್ಲಿ ಇವರ ಪಾತ್ರ, ಕರ್ತವ್ಯ, ಜವಾಬ್ದಾರಿ’ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭಗಳಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಅವರು ತಮಗೆ ಎದುರಾದ ಸಮಸ್ಯೆಗಳನ್ನು ಶಿಕ್ಷಕರು ಮತ್ತು ಪೋಷಕರೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಲು ಹಿಂಜರಿಯುತ್ತಾರೆ. ಅಂತಹ ಮಕ್ಕಳನ್ನು ಗುರುತಿಸಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಹ ಆಪ್ತ ಸಮಾಲೋಚನೆ ನಡೆಸಬೇಕು’ ಎಂದು ಹೇಳಿದರು.

‘ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳ ಜಾಲದಲ್ಲಿ ಸಿಲುಕಿರುವವರು ಸಹ ಅದರಿಂದ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಅಂತಹವರ ಕುರಿತು ಸ್ಥಳೀಯವಾಗಿ ಸಿಗುವ ಮಾಹಿತಿ ಆಧರಿಸಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಅವರನ್ನು ಗುರುತಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಆಪ್ತ ಸಮಾಲೋಚನೆ ಮಾಡಿ ಅವರನ್ನು ಆ ಆಲೋಚನೆಯಿಂದ ಹೊರತರಬೇಕು’ ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮನೋವೈದ್ಯಕೀಯ ಸಾಮಾಜಿಕ ಕಾರ್ಯ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕ ಡಾ. ಅನಿಶ್ ವಿ. ಚೆರಿಯನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪದ್ಮರಾಜ್, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯಾ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಹಿಮಾಲಯ ವೆಲ್ನೆಸ್ ಕಂಪನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾನಸಿಕ ಆರೋಗ್ಯ ವಿಭಾಗದ ಸಹಯೋಗದೊಂದಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಆನ್ಲೈನ್ ಆಪ್ತ ಸಮಾಲೋಚನೆಗೆ ‘ಟೆಲಿಮನಸ್’

ಮಾನಸಿಕ ಒತ್ತಡಕ್ಕೆ ಒಳಗಾಗಿರುವವರು ಹಾಗೂ ತಮ್ಮ ಸಮಸ್ಯೆಗಳನ್ನು ಹೊರಗಿನವರೊಂದಿಗೆ ಹಂಚಿಕೊಳ್ಳಲು ಬಯಸದವರು ಟೆಲಿಮನಸ್ ಸಹಾಯವಾಣಿ: 14416 ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಖಿನ್ನತೆ ಆತ್ಮಹತ್ಯೆ ಆಲೋಚನೆ ಸೇರಿದಂತೆ ವಿವಿಧ ರೀತಿಯ ಮಾನಸಿಕ ಸಮಸ್ಯೆಗಳಿಗೂ ಟೆಲಿಮನಸ್ ಸಹಾಯವಾಣಿಯಲ್ಲಿ ಸಲಹೆ–ಸೂಚನೆಗಳನ್ನು ನೀಡಲಾಗುತ್ತದೆ. ಅಲ್ಲದೆ ಸಹಾಯವಾಣಿಗೆ ಕರೆ ಮಾಡುವವರ ಗುರುತನ್ನು ಗೋಪ್ಯವಾಗಿಡಲಾಗುತ್ತದೆ ಎಂದು ಜಿ.ಪಂ. ಸಿಇಒ ಅನ್ಮೋಲ್ ಜೈನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.