ಭಾನುವಾರ, ಆಗಸ್ಟ್ 1, 2021
27 °C

ಕೋವಿ‌ಡ್: ರಾಮನಗರದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ತಾಲ್ಲೂಕಿನ ಹುಣಸನಹಳ್ಳಿಯ ವ್ಯಕ್ತಿಯೊಬ್ಬರು ಕೋವಿಡ್‌-19ನಿಂದಾಗಿ ಮೃತಪಟ್ಟಿದ್ದಾರೆ. 43 ವರ್ಷದ ಇವರು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದರು. ‌ ಇದರಿಂದಾಗಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಮೂವರಿಗೆ ಸೋಂಕು: ಬುಧವಾರ ಜಿಲ್ಲೆಯಲ್ಲಿ ಮೂವರಲ್ಲಿ ಸೋಂಕು ದೃಢವಾಗಿದೆ. ಚನ್ನಪಟ್ಟಣದಲ್ಲಿ ಇಬ್ಬರು ಹಾಗೂ ಮಾಗಡಿಯಲ್ಲಿ ಒಬ್ಬರಲ್ಲಿ ಸೋಂಕು ಕಂಡುಬಂದಿದ್ದು, ಅವರನ್ನು ಕೋವಿಡ್‌-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 393ಕ್ಕೆ ಏರಿಕೆ ಆಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು