ಶನಿವಾರ, ಸೆಪ್ಟೆಂಬರ್ 26, 2020
23 °C

ರಾಮನಗರ: 88 ಮಂದಿಗೆ ಕೋವಿಡ್‌ ಸೋಂಕು, ಒಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 88 ಮಂದಿಯಲ್ಲಿ ಹೊಸತಾಗಿ ಕೋವಿಡ್ ಸೋಂಕು ದೃಢವಾಗಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1086ಕ್ಕೆ ಏರಿಕೆಯಾಗಿದೆ.

ರಾಮನಗರ ತಾಲ್ಲೂಕು ಒಂದರಲ್ಲಿಯೇ 74 ಪ್ರಕರಣಗಳು ವರದಿಯಾಗಿವೆ. ಇದಲ್ಲದೆ ಚನ್ನಪಟ್ಟಣ 10, ಕನಕಪುರ 2, ಮಾಗಡಿ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಎಲ್ಲರನ್ನೂ ಕೋವಿಡ್ ರೆಫರಲ್‌ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಚನ್ನಪಟ್ಟಣ 225, ಕನಕಪುರ 192, ಮಾಗಡಿ 252 ಮತ್ತು ರಾಮನಗರದಲ್ಲಿ 417 ಪ್ರಕರಣಗಳು ವರದಿಯಾಗಿವೆ.

ಸಾವು: ಕನಕಪುರ ತಾಲ್ಲೂಕಿನಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಸಾವನ್ನಪ್ಪಿದರು. ಇದರಿಂದಾಗಿ ಜಿಲ್ಲೆಯಲ್ಲಿ ಈ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಗುಣಮುಖ: ಈ ದಿನ 8 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 527 ಜನರು ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು