ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದಾರಹಳ್ಳಿ: ಕೋವಿಡ್‌ ಸೋಂಕು ಉಲ್ಬಣ

Last Updated 13 ಮೇ 2021, 9:12 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಸೋಮೇದ್ಯಾಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದಾರಹಳ್ಳಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪಂಚಾಯಿತಿಯಿಂದ ಬುಧವಾರ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಯಿತು.

ಗ್ರಾಮದಲ್ಲಿ ಐವರಲ್ಲಿ ಕೋವಿಡ್‌ ಇರುವುದು ಬೆಳಿಗ್ಗೆ ಗೊತ್ತಾಗುತ್ತಿದ್ದಂತೆ ಸೋಂಕಿತರಲ್ಲಿ ಇಬ್ಬರನ್ನು ಹೋಂ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿ, ಮೂವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಸೋಂಕು ತಡೆಗಟ್ಟಲು ಗ್ರಾಮದ ಎಲ್ಲಾ ರಸ್ತೆಗಳಿಗೂ ಸೋಂಕು ನಿವಾರಕ ದ್ರಾವಣವನ್ನು ಟ್ರ್ಯಾಕ್ಟರ್‌ ಮೂಲಕ ಪಂಚಾಯಿತಿ ಸಿಬ್ಬಂದಿ ಸಿಂಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಜೀವನ್‌ಕುಮಾರ್‌ ಮಾತನಾಡಿ, ನಗರ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸೋಂಕು ಈಗ ಗ್ರಾಮೀಣ ಪ್ರದೇಶದಲ್ಲೂ ಕಾಣಿಸಿಕೊಂಡು ಹೆಚ್ಚಳವಾಗುತ್ತಿದೆ. ಹಳ್ಳಿಯ ಜನತೆಯು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಅರಳಿಕಟ್ಟೆ, ದೇವಸ್ಥಾನ, ಟೀ ಸ್ಟಾಲ್‌, ಹೋಟೆಲ್‌ಗಳ ಮುಂದೆ ಗುಂಪಾಗಿ ಕೂರಬಾರದು ಎಂದು ಮನವಿ ಮಾಡಿದರು.

ಪಂಚಾಯಿತಿ ಅಭಿವೃದ್ಧಿ ಮುನಿರಾಜು, ಪಂಚಾಯಿತಿ ಸದಸ್ಯೆ ಮಂಗಳಾ, ಕರ ವಸೂಲಿಗಾರ ಕಾಂತರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT