ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಸ್ಯಾನಿಟೈಸ್ ಮಾಡುವ ಸಲುವಾಗಿ ಕಚೇರಿಯನ್ನು ಮುಚ್ಚಲಾಗಿದೆ. ಸಾರ್ವಜನಿಕರು ಇತ್ತ ಬರಬೇಡಿ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಆರು ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಒಬ್ಬರು ಗುಣಮುಖರಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋಡಿಹಳ್ಳಿ ಠಾಣೆ ಸಬ್ ಇನ್ ಸ್ಪೆಕ್ಟರ್ ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಸೋಮವಾರ ಠಾಣೆಯನ್ನು ಸೀಲ್ ಡೌನ್ ಮಾಡಿದ್ದು, ಅವರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.