ರಾಮನಗರ: ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಭಾನುವಾರ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಚನ್ನಪಟ್ಟಣ ತಾಲೂಕಿನ ಬಾಣಂತಹಳ್ಳಿಯ 65 ವರ್ಷದ ವೃದ್ಧೆಗೆ ಸೋಂಕು ಇರುವುದು ಖಾತ್ರಿಯಾಗಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಮಹಿಳೆ ಅನಾರೋಗ್ಯದ ಕಾರಣದಿಂದ ಹತ್ತು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ.

’ಕಳೆದ ಹಲವು ದಿನಗಳಿಂದ ಸೋಂಕಿತೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ವೃದ್ಧೆಯ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ತಿಳಿಸಿದರು.

ರಾಮನಗರ ಕುಂಬಾರ ಬೀದಿ 57ವರ್ಷ ವಯಸ್ಸಿನ ವ್ಯಕ್ತಿಗೆ ಇದೇ 1ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ಸೋಂಕು ಹಬ್ಬಿತ್ತು. ಅದೇ ದಿನ ಚನ್ನಪಟ್ಟಣ ತಾಲೂಕಿನ ಶ್ಯಾನಬೋಗನಹಳ್ಳಿಯ 27 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಈ ಇಬ್ಬರೂ ರಾಮನಗರದ ಕೋವಿಡ್ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಗಡಿ ತಾಲ್ಲೂಕಿನ ಗ್ರಾಮವೊಂದರ ಎರಡು ವರ್ಷದ ಮಗುವಿಗೆ ಸೋಂಕು ತಗುಲಿತ್ತು. ಈಗ ಮಗು ಗುಣಮುಖವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.