ಬುಧವಾರ, ಜನವರಿ 27, 2021
24 °C

ಇನ್ನೊಂದು ವಾರದಲ್ಲಿ ಕೋವಿಡ್ ಲಸಿಕೆ ಹಂಚಿಕೆ: ಡಿಸಿಎಂ ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇನ್ನು ಒಂದು ವಾರದಲ್ಲಿ ರಾಜ್ಯದಲ್ಲಿ ಕೋವಿಡ್ ಲಸಿಕೆ ಲಭ್ಯ ಆಗಲಿದ್ದು, ವಿತರಣೆಗೆ ಅಗತ್ಯ ಸಿದ್ಧತೆಗಳು ನಡೆದಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿ‌ನ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ ಲಸಿಕೆಯ ಪೂರ್ವ ತಾಲೀಮು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಲಸಿಕೆ ನೀಡಲು ಬೇಕಾದ ಪೂರ್ವಸಿದ್ಧತೆಗಳು ಯಶಸ್ವಿಯಾಗಿ ನಡೆದಿವೆ. ಮೊದಲ ಹಂತದಲ್ಲಿ ಆರೋಗ್ಯ ವಲಯದ ಎಲ್ಲ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು. ಮೊದಲ ದಿನ  ಒಂದು ಲಸಿಕೆ, 28 ದಿನಗಳ ತರುವಾಯ ಇನ್ನೊಂದು ಲಸಿಕೆ ನೀಡಲಾಗುವುದು ಎಂದು ವಿವರಿಸಿದರು. 

ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ಆರ್ ಸಿಎಚ್ ಅಧಿಕಾರಿ ಪದ್ಮಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು