ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಚಾಲಕರಿಗೆ ಕೋವಿಡ್‌ ಲಸಿಕೆ

Last Updated 31 ಮೇ 2021, 2:29 IST
ಅಕ್ಷರ ಗಾತ್ರ

ರಾಮನಗರ: ಸರ್ಕಾರದ ಆದ್ಯತಾ ಪಟ್ಟಿ ಆಧರಿಸಿ ಬಿಡದಿ ಕೈಗಾರಿಕಾ ಪ್ರದೇಶದ 500ಕ್ಕೂ ಹೆಚ್ಚು ವಾಹನ ಚಾಲಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎಚ್. ರಾಜಣ್ಣ ತಿಳಿಸಿದರು.

ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಭಾನುವಾರ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳಿಗ್ಗೆಯೇ ಚಾಲಕರಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಯಿತು. 18ರಿಂದ 45 ವರ್ಷದವರಿಗೂ ಈಗ ಲಸಿಕೆ ನೀಡಲಾಗುತ್ತಿದೆ. ಈ ಹಿಂದೆಯೂ ಜಿಲ್ಲೆಯ ವಾಹನ ಸವಾರರಿಗೆ ಕೋವಿಡ್ ಲಸಿಕೆ ನೀಡಲಾಗಿತ್ತು ಎಂದುಹೇಳಿದರು.

ಕಾರ್ಯಕ್ರಮದಲ್ಲಿ ನಾಲ್ಕು ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ಬಿಡದಿ ಕೈಗಾರಿಕಾ ಪ್ರದೇಶದ ಚಾಲಕರು ಯೂನಿಫಾರಂನೊಂದಿಗೆ ಬಂದು ಲಸಿಕೆ ಪಡೆಯುತ್ತಿದ್ದಾರೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪದ್ಮಾ, ರಾಮನಗರ ತಾಲ್ಲೂಕು ಆರೋಗ್ಯಾಧಿಕಾರಿ ಶಶಿಕಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರ್‌ ವಾಹನ ಅಧಿಕಾರಿ ಪ್ರಸನ್ನಕುಮಾರ್, ಕಚೇರಿ ಅಧೀಕ್ಷಕ ಚಂದ್ರಶೇಖರ್, ಡಾ.ಹರ್ಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT