ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ರಾಮನಗರ ಜಿಲ್ಲೆಯಲ್ಲಿ 61 ಪ್ರಕರಣ ದೃಢ

Last Updated 2 ಅಕ್ಟೋಬರ್ 2020, 14:04 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರ 61 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.

ಚನ್ನಪಟ್ಟಣ 12, ಕನಕಪುರ 21, ಮಾಗಡಿ 10 ಮತ್ತು ರಾಮನಗರ 18 ಪ್ರಕರಣಗಳು ಇದರಲ್ಲಿ ಸೇರಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 5728ಕ್ಕೆ ಏರಿಕೆ ಆಗಿದೆ. ಈ ಪೈಕಿ ಚನ್ನಪಟ್ಟಣ 1380, ಕನಕಪುರ 1198, ಮಾಗಡಿ 892 ಮತ್ತು ರಾಮನಗರ 2258 ಸೋಂಕಿತರು ಪತ್ತೆ ಆಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಮಂದಿ 55 ನಿಧನರಾಗಿದ್ದಾರೆ.

ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 7, ಕನಕಪುರ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 2 ಹಾಗೂ ರಾಮನಗರ ತಾಲ್ಲೂಕಿನಲ್ಲಿ 11 ಜನ ಸೇರಿ ಒಟ್ಟಾರೆ 25 ಜನರು ಗುರುವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4866 ಜನರು ಗುಣಮುಖರಾಗಿದ್ದಾರೆ. ಇನ್ನೂ 807 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT