ಚನ್ನಪಟ್ಟಣ: ಅಧಿಕಾರಿಗಳ ಕರ್ತವ್ಯ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಅಧಿಕಾರಿಗಳು ವಹಿಸಿಕೊಂಡಿರುವ ಅಭಿವೃದ್ಧಿ ಕೆಲಸದ ಬಗ್ಗೆ ಗಮನ ಹರಿಸಬೇಕು. ಜತೆಗೆ ಸಾರ್ವಜನಿಕರ ಕೆಲಸದ ವಿಚಾರದಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಾಕೀತು ಮಾಡಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಜಲಜೀವನ್ ಕಾಮಗಾರಿ ಕಳಪೆಯಾಗಿದೆ. ವಾರ್ಡ್ಗಳ ರಸ್ತೆಗಳು ಗುಂಡಿ ಬಿದ್ದಿವೆ. ಇಂತಹ ಹಲವು ಆರೋಪಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ತಮಗೆ ಸಂಬಂಧಿಸಿದ ಕಾರ್ಯವನ್ನು ಸೂಕ್ತವಾಗಿ ನಿರ್ವಹಿಸಬೇಕು ಎಂದರು.

ಜಲಜೀವನ್ ಕಾಮಗಾರಿಯಿಂದಾಗಿ ಪ್ರತಿ ವಾರ್ಡ್ಗಳಲ್ಲೂ ರಸ್ತೆಗಳು ಗುಂಡಿ ಬಿದ್ದಿವೆ. ಇದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರ ಜತೆಗೆ ರಸ್ತೆ ಅಗೆಯುವಾಗ ನೀರಿನ ಪೈಪ್ಗಳು ಒಡೆದು ಕೊಳಚೆ ನೀರು ಅದರಲ್ಲಿ ಸೇರುವಂತಾಗಿದೆ. ಇದರಿಂದ ಕಡಿಯುವ ನೀರು ಕಲುಷಿತಗೊಳ್ಳುತ್ತಿದೆ. ಈ ಬಗ್ಗೆ ಸಾರ್ವಜನಿಕವಾಗಿ ಆರೋಪ ಕೇಳಿ ಬರುತ್ತಿದೆ ಎಂದರು.

ಈಗಾಗಲೇ ಸಾಕಷ್ಟು ವಾರ್ಡ್ಗಳಲ್ಲಿ ರಸ್ತೆಗಳಿಗೆ ಡಾಂಬರು ಹಾಕುವ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಜಲಜೀವನ್ ಕಾಮಗಾರಿ ಪೂರ್ಣಗೊಳ್ಳದೆ ಆ ರಸ್ತೆಗಳಿಗೆ ಡಾಂಬರು ಹಾಕಿದರೆ ಮತ್ತೆ ಅದನ್ನು ಜಲಜೀವನ್ ಕಾಮಗಾರಿಗಾಗಿ ಅಗೆದರೆ ಡಾಂಬರು ಹಾಕಿದ್ದು ಪ್ರಯೋಜನವಾಗುವುದಿಲ್ಲ. ಡಾಂಬರು ಹಾಕುವ ಮೊದಲೇ ಯೋಜನೆ ಪೂರ್ಣಗೊಳಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ಅಧಿಕಾರಿಗಳು ಲೋಪ ಮಾಡಬಾರದು. ಈ ಬಗ್ಗೆ ಸಾರ್ವಜನಿಕ ದೂರುಗಳು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬೆಸ್ಕಾಂ, ಅರಣ್ಯ ಇಲಾಖೆ, ಗ್ಯಾಸ್ಲೈನ್ ಪೈಪ್ ಅಳವಡಿಕೆ, ಅಂಗನವಾಡಿ ಕಟ್ಟಡಗಳ ಬಗ್ಗೆ ಮಾತನಾಡಿದ ಶಾಸಕರು, ಎಲ್ಲ ಇಲಾಖಾ ಅಧಿಕಾರಿಗಳು ಒಂದು ಸಭೆ ನಡೆಸಿ ಏನೆಲ್ಲ ಕಾಮಗಾರಿ ಆಗಬೇಕಿದೆ. ಯಾವೆಲ್ಲ ತೊಂದರೆಗಳಿವೆ ಎಂಬುದನ್ನು ಚರ್ಚಿಸಿದರೆ ಎಲ್ಲ ಕೆಲಸ ಕಾರ್ಯ ಸುಗಮವಾಗಿ ಆಗಲಿದೆ ಎಂದರು.

ಸಭೆಯಲ್ಲಿ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಆಗಬೇಕಿರುವ ಕೆಲಸ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ನಗರಸಭೆ ಅಧ್ಯಕ್ಷ ವಾಸಿಲ್ ಅಲಿಖಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಪೌರಯುಕ್ತ ಎಂ.ಮಹೇಂದ್ರ, ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.