ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ; ಅಪಹರಣ ಶಂಕೆ

Published 2 ಡಿಸೆಂಬರ್ 2023, 10:17 IST
Last Updated 2 ಡಿಸೆಂಬರ್ 2023, 10:17 IST
ಅಕ್ಷರ ಗಾತ್ರ

ಚನ್ನಪಟ್ಟಣ (ರಾಮನಗರ): ತಾಲ್ಲೂಕಿನ ಪ್ರಭಾವಿ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು, ಚಕ್ಕೆರೆ ಗ್ರಾಮದಲ್ಲಿರುವ ತಮ್ಮ ಮನೆಯಿಂದ ಶನಿವಾರ ‌ನಾಪತ್ತೆಯಾಗಿದ್ದಾರೆ.

62 ವರ್ಷದ ಮಹದೇವಯ್ಯ ಅವರು ಗ್ರಾಮದ ತೋಟದ ಮನೆಯಲ್ಲಿ ಅವರು ವಾಸವಿದ್ದರು. ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ, ಮನೆಯಲ್ಲಿ ಅವರೊಬ್ಬರೇ ಇದ್ದರು. ಮಧ್ಯಾಹ್ನ ಸ್ಥಳೀಯರು ಮನೆಗೆ ಹೋಗಿದ್ದಾಗ, ಮಹದೇವಯ್ಯ ಅವರು ಇರಲಿಲ್ಲ.

ಬೆಡ್ ರೂಮ್ ನ ಅಲ್ಮೆರಾ ತೆರೆದಿದ್ದು, ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಹಾಗಾಗಿ, ಯಾರೋ ಅವರನ್ನು ಅಪಹರಿಸಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿರುವ ಅನುಮಾನ ವ್ಯಕ್ತವಾಗಿದ್ದು, ಕೂಡಲೇ ಕುಟುಂಬದವರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಟವರ್ ಲೊಕೇಷನ್ ಮಾದೇಶ್ವರ ಬೆಟ್ಟದ ಭಾಗದಲ್ಲಿ ತೋರಿಸುತ್ತಿದೆ ಎಂದು‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT