ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ| ಇನ್ನೂ ಪತ್ತೆಯಾಗದ ಸಿ.ಪಿ. ಯೋಗೇಶ್ವರ್ ಭಾವ ಮಹದೇವಯ್ಯ

Published 3 ಡಿಸೆಂಬರ್ 2023, 15:47 IST
Last Updated 3 ಡಿಸೆಂಬರ್ 2023, 15:47 IST
ಅಕ್ಷರ ಗಾತ್ರ

ಚನ್ನಪಟ್ಟಣ: ಶನಿವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಬಗ್ಗೆ ಭಾನುವಾರ ಸಂಜೆಯಾದರೂ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಮಹದೇವಯ್ಯ ಅವರು ತಾಲ್ಲೂಕಿನ ಚಕ್ಕೆರೆ ಗ್ರಾಮದ ತಮ್ಮ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ಮನೆಯಲ್ಲಿಯ ವಸ್ತುಗಳ ಚೆಲ್ಲಾಪಿಲ್ಲಿ, ದಾಖಲೆಗಳ ಹುಡುಕಾಟವನ್ನು ಗಮನಿಸಿ ಮಹದೇವಯ್ಯ ಅವರ ಅಪಹರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ಬಗ್ಗೆ ಮಹದೇವಯ್ಯ ಅವರ ಪುತ್ರ ಪ್ರಶಾಂತ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಭಾನುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕರಿ ಕಾರ್ತಿಕ್ ರೆಡ್ಡಿ ಅವರು ಚನ್ನಪಟ್ಟಣ ಡಿವೈಎಸ್ಪಿ ಕಚೇರಿಗೆ ಆಗಮಿಸಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು, ನಂತರ ಡಿವೈಎಸ್ಪಿ ಗಿರೀಶ್ ನೇತೃತ್ವದಲ್ಲಿ ಐದು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಪ್ರಕರಣದ ತನಿಖೆ ನಡೆಸುವಂತೆ ಆದೇಶಿಸಿದರು.

ಪ್ರಕರಣದ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಜೊತೆಗೆ ಅವರ ಕಾರು ಸಹ ಪತ್ತೆಯಾಗಿಲ್ಲ. ನಿರಂತರವಾಗಿ ಮೊಬೈಲ್ ಲೊಕೇಷನ್ ಪರಿಶೀಲನೆ ನಡೆಸಲಾಗುತ್ತಿದೆ. ಅವರ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಕೆಟ್ಟಿರುವ ಕಾರಣ ಅಕ್ಕಪಕ್ಕದಲ್ಲಿ ಇರುವ ಸಿ.ಸಿ. ಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದ್ದು, ಶೀಘ್ರವೇ ಪ್ರಕರಣ ಬೇಧಿಸಲಾಗುವುದು ಎಂದು ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT