ಗುರುವಾರ , ಡಿಸೆಂಬರ್ 12, 2019
17 °C

ಯೋಗೇಶ್ವರ್‌ ಅಭ್ಯರ್ಥಿ: ಪೋಸ್ಟರ್‌ ಹಂಚಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚನ್ನಪಟ್ಟಣದ ಸಿ.ಪಿ. ಯೋಗೇಶ್ವರ್‌ ಹೆಸರೂ ಕೇಳಿಬರುತ್ತಿದೆ. ಪಕ್ಷದ ಹೈಕಮಾಂಡ್‌ ಟಿಕೆಟ್‌ ಖಾತ್ರಿ ಪಡಿಸದೇ ಹೋದರೂ ಈಗಾಗಲೇ ಯೋಗೇಶ್ವರ್‌ ಪರ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

‘ಹುಣಸೂರು ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ’ ಎಂದು ಬಿಜೆಪಿ ಕಾರ್ಯಕರ್ತರು ಪೋಸ್ಟರ್‌ಗಳನ್ನು ವಿನ್ಯಾಸ ಮಾಡಿದ್ದು, ಅದರಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರ ಚಿತ್ರದ ಜೊತೆಗೆ ಯೋಗೇಶ್ವರ್‌ ಚಿತ್ರವೂ ಇದೆ. ಇದನ್ನೇ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಯೋಗೇಶ್ವರ್‌ಗೆ ಹೈಕಮಾಂಡ್‌ ಟಿಕೆಟ್‌ ಖಾತ್ರಿಪಡಿಸಿದ್ದು, ಶುಕ್ರವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಚನ್ನಪಟ್ಟಣದಾದ್ಯಂತ ಸುದ್ದಿ ಹಬ್ಬಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು