ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಪಿ. ಯೋಗೇಶ್ವರ್ ಬಾವ ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Published 28 ಡಿಸೆಂಬರ್ 2023, 8:10 IST
Last Updated 28 ಡಿಸೆಂಬರ್ 2023, 8:10 IST
ಅಕ್ಷರ ಗಾತ್ರ

ಚನ್ನಪಟ್ಟಣ (ರಾಮನಗರ): ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಗುರುವಾರ ಸಿಐಡಿಗೆ ವರ್ಗಾಯಿಸಿದೆ.

ಚನ್ನಪಟ್ಟಣ ಗ್ರಾಮಾಂತರ ‌ಪೊಲೀಸರು ನಡೆಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದ ಬೆನ್ನಲ್ಲೇ, ಸಿಐಡಿ ಡಿವೈಎಸ್ಪಿ ಮಲ್ಲಿಕಾರ್ಜುನ್ ನೇತೃತ್ವದ ತಂಡ ಚನ್ನಪಟ್ಟಣಕ್ಕೆ ಭೇಟಿ ನೀಡಿತು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದರು. ಜೊತಗೆ ಪ್ರಕರಣಕ್ಕೆ ಸಂಬಂಧಿಸಿದ‌ ಕಡತಗಳನ್ನು ಸ್ಥಳೀಯ ಪೊಲೀಸರಿಂದ ಪಡೆದುಕೊಂಡರು.

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಈಗಾಗಲೇ ಆರೋಪಿಗಳಾದ ಮುರುಗೇಶನ್, ಆತನ ಪತ್ನಿ ರಾಧಾ, ಪ್ರಭಾಕರ್‌ ಹಾಗೂ ಮದನ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಆರೋಪಿಗಳೆಲ್ಲರೂ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪೆನ್ಮಾಗ್ರಂ ಗ್ತಾಮದವರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT