ಸೆ.7ರಂದು ತೂಬಿನಕೆರೆ ಗ್ರಾಮದಲ್ಲಿ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನೋಡಲು ನಿಂತಿದ್ದ ಮಹಿಳೆ ಜೊತೆ ರಾಜು ಅಸಭ್ಯವಾಗಿ ವರ್ತಿಸಿದ್ದ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿತ್ತು. ಕೂಡಲೇ ಆರೋಪಿ ತಲೆ ಮರೆಸಿಕೊಂಡಿದ್ದ. ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗುತ್ತಿದ್ದಂತೆ ಬಿಜೆಪಿ ಜಿಲ್ಲಾ ಘಟಕ, ಆತನನ್ನು ಪಕ್ಷದಿಂದ ಅಮಾನತು ಮಾಡಿದೆ.