ರಾಮನಗರ: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಯೋಜನೆಯಡಿ, ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ₹22 ಕೋಟಿ ವೆಚ್ಚದಲ್ಲಿ ಮೂರು ಅಂತಸ್ತಿನ ನಿರ್ಣಾಯಕ ಆರೈಕೆ ಕೇಂದ್ರ (ಕ್ರಿಟಿಕಲ್ ಕೇರ್ ಸೆಂಟರ್) ಕಟ್ಟಡ ನಿರ್ಮಾಣಕ್ಕೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಹುಸೇನ್, ‘ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ರಾಮನಗರದ ಜಿಲ್ಲಾ ಕೇಂದ್ರದ ಹಳೆಯ ಜಿಲ್ಲಾಸ್ಪತ್ರೆಯ ಕಟ್ಟಡ ಕಿರಿದಾಗಿತ್ತು. ಆಸ್ಪತ್ರೆಯಲ್ಲಿ ಸೀಮಿತ ಸೇವೆಗಳಷ್ಟೇ ಸಿಗುತ್ತಿದ್ದವು. ಈಗ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಹೊಸ ಜಿಲ್ಲಾಸ್ಪತ್ರೆ ಕಟ್ಟಡ ನಿರ್ಮಿಸಿ ಹೆಚ್ಚುವರಿ ಸೇವೆಗಳನ್ನು ಆರಂಭಿಸಲಾಗಿದೆ. ಅದಕ್ಕೆ, ಪೂರಕವಾಗಿ ಆಸ್ಪತ್ರೆ ಆವರಣದಲ್ಲಿ ನಿರ್ಣಾಯಕ ಆರೈಕೆ ಕೇಂದ್ರ ನಿರ್ಮಾಣವಾಗುತ್ತಿದೆ’ ಎಂದರು.

‘ಸುಮಾರು 50 ಹಾಸಿಗೆಗಳ ಸಾಮರ್ಥ್ಯದ ನೂತನ ಕೇಂದ್ರದಲ್ಲಿ ಅಪಘಾತ ಸೇರಿದಂತೆ ವಿವಿಧ ರೀತಿಯ ತುರ್ತು ಹಾಗೂ ನಿರ್ಣಾಯಕ ಚಿಕಿತ್ಸೆಗಳಿಗೆ ಸಂಬಂಧಿಸಿದ ಟ್ರಾಮಾ ಸೆಂಟರ್, ತುರ್ತು ಶಸ್ತ್ರಚಿಕಿತ್ಸೆ, ತೀವ್ರ ನಿಗಾ ಘಟಕ (ಐಸಿಯು), ಎಂಆರ್ಐ ಸ್ಕ್ಯಾನಿಂಗ್, ಸಿಟಿ ಸ್ಕ್ಯಾನಿಂಗ್, ಎಕ್ಸ್ರೇ, ಡಿಜಿಟಲ್ ಎಕ್ಸ್ರೇಯಂತಹ ವೈದ್ಯಕೀಯ ಸೌಲಭ್ಯಗಳು ಲಭ್ಯ ಇರಲಿವೆ’ ಎಂದು ಹೇಳಿದರು.

‘ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈದ್ಯರು ತಂಡವು ಉತ್ತಮ ಸೇವೆಯನ್ನು ನೀಡುತ್ತಿದೆ. ಆಸ್ಪತ್ರೆಗೆ ಡಿ ಗ್ರೂಪ್, ಶುಶ್ರೂಷಕರು ಸೇರಿದಂತೆ ಕೆಲ ಸಿಬ್ಬಂದಿಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಖಾಲಿ ಹುದ್ದೆಗಳ ಭರ್ತಿ ಮಾಡುವಂತೆ ಈಗಾಗಲೇ ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಆಯುಕ್ತರ ಗಮನಕ್ಕೂ ತರಲಾಗಿದೆ. ವೈದ್ಯರು ಮತ್ತು ಸಿಬ್ಬಂದಿ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಡಾ. ನಾರಾಯಣ ಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು, ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಎಚ್. ರಾಜು, ನಗರಸಭೆ ಸದಸ್ಯರಾದ ಅಸ್ಮತ್, ಆಯೇಷಾ ಬಾನು, ಆರೀಪ್, ಪೈರೋಜ್, ನಿಜಾಂ ಷರೀಪ್, ಕಾಂಗ್ರೆಸ್ ಮುಖಂಡರಾದ ಸಿ.ಎನ್.ಆರ್. ವೆಂಕಟೇಶ್, ಅನಿಲ್ ಜೋಗೇಂದರ್, ರೈಡ್ನಾಗರಾಜು, ಕೆಂಪರಾಮು, ಪಾರ್ಥಸಾರಥಿ, ನರಸಿಂಹಯ್ಯ, ಗುರುವಯ್ಯ, ವೆಂಕಟೇಶ್ ಹಾಗೂ ಇತರರು ಇದ್ದರು.

‘ಮುನಿರತ್ನ ಮಾತಿಂದ ನೋವಾಗಿದೆ

’ ‘ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ಸಮುದಾಯಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವುದನ್ನು ಕೇಳಿ ನನಗೂ ನೋವಾಗಿದೆ. ಶಾಸಕರಾಗಿ ಮತ್ತು ಸಚಿವರಾಗಿಯೂ ಸೇವೆ ಸಲ್ಲಿಸಿರುವ ಹಿರಿಯರಾದ ಅವರು ಆ ರೀತಿ ಮಾತನಾಡಬಾರದಿತ್ತು’ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಹುಸೇನ್ ಪ್ರತಿಕ್ರಿಯಿಸಿದರು. ‘ಜಿಲ್ಲೆಯಲ್ಲಿರುವ ನಗರ ಸ್ಥಳೀಯ–ಸಂಸ್ಥೆಗಳಾದ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿ ನಡೆದಿದೆ. ರಾಮನಗರ ಮತ್ತು ಚನ್ನಪಟ್ಟಣಕ್ಕೆ ಮಾತ್ರ ದಿನಾಂಕ ನಿಗದಿಯಾಗಿಲ್ಲ. ಅಧಿಕಾರಿಗಳು ಎಲ್ಲವನ್ನೂ ನೋಡಿಕೊಂಡು ಹಂಹಂತವಾಗಿ ದಿನಾಂಕ ನಿಗದಿಪಡಿಸಿ ಚುನಾವಣೆ ನಡೆಸುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.