ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಿಪ್ಪಸಂದ್ರ: ಗುರುವಂದನಾ ಕಾರ್ಯಕ್ರಮ

Published 4 ಜುಲೈ 2024, 6:27 IST
Last Updated 4 ಜುಲೈ 2024, 6:27 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಕರ್ನಾಟಕ ಪಬ್ಲಿಕ್ ಶಾಲೆಯ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ನಡೆಯಿತು.

ನಿವೃತ್ತ ಮುಖ್ಯೋಪಾಧ್ಯಾಯ ಪಿ.ನಾಗರಾಜು ಮಾತನಾಡಿ, ಪೋಷಕರು ಹಾಗೂ ಗುರುಗಳು ಮಗುವಿನ ಭವಿಷ್ಯ ರೂಪಿಸುವ ರಾಯಭಾರಿಗಳು. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಅವರಿಗೆ ಆಗುವ ಸಂತೋಷಕ್ಕೆ ಪಾರವೇ ಇಲ್ಲ. ಗುರುವಂದನಾ ಕಾರ್ಯಕ್ರಮಗಳು ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿಸುತ್ತದೆ ಎಂದರು.

ಮಾಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಮಾತನಾಡಿ, ಶಿಸ್ತು ವಿದ್ಯಾರ್ಥಿಗಳ ಬದುಕಿನ ಸೌಂದರ್ಯವನ್ನು ಹೆಚ್ಚಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ಕಟ್ಟಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ವಿದ್ಯಾರ್ಥಿಗಳು ಶಾಲೆಯಲ್ಲಿ ಪಾಠ ಪ್ರವಚನ ಕೇಳುವ ಅವಿಸ್ಮರಣೀಯ ಘಟನೆಗಳನ್ನು ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಜತೆಗೆ ಹಳೆ ವಿದ್ಯಾರ್ಥಿಗಳು ಶಾಲಾ ದಿನಗಳ ನೆನಪನ್ನು ಮೆಲಕು ಹಾಕಿದರು.

ನಂಜೇಗೌಡ, ಗಂಗಚಿಕ್ಕಯ್ಯ, ಗಿರಿಜಾಂಬ, ಟಿ.ವಿ ಗೋವಿಂದರಾಜು, ಗುರು ನಂಜಯ್ಯ, ರಜನಿ ಶೇಖರ್, ಎಸ್.ಜಿ ಶಂಕರ್, ನಿಂಗಾಚಾರ್, ವನಿತಾ ನಾಯಕ್, ನರಸಮ್ಮ, ರಾಜಣ್ಣ ಅವರನ್ನು ಹಳೆ ವಿದ್ಯಾರ್ಥಿಗಳು ಗೌರವಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ಹಾಗೂ ನೋಟ್ ಪುಸ್ತಕವನ್ನು ವಿತರಣೆ ಮಾಡಲಾಯಿತು.

ನರಸಿಂಹಮೂರ್ತಿ, ಶಿವಕುಮಾರ್, ಪುಟ್ಟರಾಜು, ಶ್ಯಾಮಲಾ, ಜ್ಞಾನಮೂರ್ತಿ, ರಮೇಶ್, ತಿಪ್ಪಸಂದ್ರ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT