ಸೋಮವಾರ, ಸೆಪ್ಟೆಂಬರ್ 20, 2021
24 °C

ಸಿಲಿಂಡರ್ ಸ್ಫೋಟ: ಮನೆಗೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ತಾಲ್ಲೂಕಿನ ಬ್ಯಾಲಕುಳಿದೊಡ್ಡಿ ಗ್ರಾಮದ ಬಿ.ಎಚ್. ರಾಜಣ್ಣ ಎಂಬುವರ ಮನೆಯಲ್ಲಿ ಶನಿವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಮನೆಗೆ ಹಾನಿಯಾಗಿದೆ‌.

ಬೆಳಗ್ಗೆ ಹಾಲು ಕಾಯಿಸುವ ಸಮಯದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತು. ಮನೆಯಲ್ಲಿದ್ದ ನಾಲ್ವರು ಹೊರಗೆ ಓಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ‌ ಒಂದು ಗಂಟೆ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಿದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು