ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಸತ್ಯಹರಿಶ್ಚಂದ್ರನ ಮೊಮ್ಮಗ ಅಲ್ಲವೇ?: ಡಿ.ಕೆ.ಶಿವಕುಮಾರ್

Published 27 ಏಪ್ರಿಲ್ 2024, 6:45 IST
Last Updated 27 ಏಪ್ರಿಲ್ 2024, 6:45 IST
ಅಕ್ಷರ ಗಾತ್ರ

ಕನಕಪುರ (ರಾಮನಗರ): ‘ಎಚ್‌.ಡಿ. ಕುಮಾರಸ್ವಾಮಿ ಸತ್ಯಹರಿಶ್ಚಂದ್ರನ ಮೊಮ್ಮಗ ಅಲ್ಲವೇ? ಖಾಲಿ ಮಾತಿನ ಮೂಲಕ ಹಿಟ್ ಅಂಡ್ ರನ್ ಮಾಡುವುದನ್ನು ಬಿಟ್ಟು ಗಿಫ್ಟ್ ಕಾರ್ಡ್ ಬಗ್ಗೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಕೊಡಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. 

ತಾಲ್ಲೂಕಿನ ದೊಡ್ಡಆಲಹಳ್ಳಿಯ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಿಫ್ಟ್ ಕಾರ್ಡ್ ಮತ್ತು ಹಣ ಹಂಚುತ್ತಿರುವುದು ಕುಮಾರಸ್ವಾಮಿ. ತಾನು ಮಾಡಬಾರದ್ದನ್ನು ಮಾಡಿ ಬೇರೆಯವರ ಮೂತಿಗೆ ಒರೆಸುವುದು ಅವರ ಜಾಯಮಾನ ಎಂದು ಟೀಕಿಸಿದರು.

‘ನಾವು ಬಸವಣ್ಣನ ನಾಡಿನವರು ನುಡಿದಂತೆ ನಡೆಯುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಕೂಡ ಬಸವಣ್ಣನ ನಾಡಿನಲ್ಲಿ ಜನಿಸಿದವರು. ಗ್ಯಾರಂಟಿ ಜಾರಿ ಮಾಡಿ ಜನರ ಬದುಕು ಬದಲಾವಣೆ ಮಾಡುತ್ತೇವೆ’ ಎಂದು ಭರವಸೆ ನೀಡಿದರು.

‘ಜೆಡಿಎಸ್‌ನವರಿಗೆ ಬೇರೆಯವರ ಏಳಿಗೆ ಸಹಿಸುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ವಿರುದ್ಧ ಮುಗಿಬೀಳುತ್ತಾರೆ. ಬಿಜೆಪಿ ನಾಯಕರು ಸಹಕಾರ ನೀಡುತ್ತಿಲ್ಲ ಎಂದು ದೇವೇಗೌಡರು ಈಗಾಗಲೇ ಹೇಳಿದ್ದಾರೆ. ಅವರ ಮುಂದಿನ ಟಾರ್ಗೆಟ್ ಬಿಜೆಪಿ’ ಎಂದರು.

ಜೆಡಿಎಸ್‌ನವರು ಬೇರೆಯವರ ಏಳಿಗೆ ಸಹಿಸುವುದಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ವಿರುದ್ಧ ಮುಗಿಬೀಳುತ್ತಾರೆ. ಬಿಜೆಪಿ ನಾಯಕರು ಸಹಕಾರ ನೀಡುತ್ತಿಲ್ಲ ಎಂದು ದೇವೇಗೌಡರು ಈಗಾಗಲೇ ಹೇಳಿದ್ದಾರೆ. ಅವರ ಮುಂದಿನ ಟಾರ್ಗೆಟ್ ಬಿಜೆಪಿ
– ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT