ಮಾಗಡಿ (ರಾಮನಗರ): ‘ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ದಾಖಲಾಗಿದ್ದ ರಾಜಕೀಯ ಪ್ರೇರಿತ ಪ್ರಕರಣದ ವಿರುದ್ಧ ಜಯ ಸಿಕ್ಕಿದೆ. ಸುಪ್ರೀಂ ಕೋರ್ಟ್ ನ್ಯಾಯವನ್ನು ಎತ್ತಿ ಹಿಡಿದಿದೆ’ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪು ಕುರಿತು ತಾಲ್ಲೂಕಿನ ಕಲ್ಲುದೇವನಹಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಡಿ.ಕೆ. ಶಿವಕುಮಾರ್ ಅವರ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿ ರಾಜಕೀಯ ಪ್ರೇರಿತವಾಗಿದ್ದು, ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ನಾವು ಪದೇ ಪದೇ ಹೇಳುತ್ತಾ ಬಂದಿದ್ದೆವು’ ಎಂದರು.

‘ಪ್ರಕರಣದಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುತ್ತಾ ಬಂದಿದ್ದೆವು. ಅದರಂತೆ, ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ. ಇದರಿಂದ ಕೋರ್ಟ್ ಮೇಲಿನ ಗೌರವ ಹೆಚ್ಚಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.