ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ವಸ್ತು ಪ್ರದರ್ಶನ: ರಾಮನಗರ ಜಿಲ್ಲೆಗೆ ತೃತೀಯ ಸ್ಥಾನ

Published 15 ಜನವರಿ 2024, 15:33 IST
Last Updated 15 ಜನವರಿ 2024, 15:33 IST
ಅಕ್ಷರ ಗಾತ್ರ

ರಾಮನಗರ: ಮೈಸೂರಿನಲ್ಲಿ 2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಮಟ್ಟದ ವಸ್ತು ಪ್ರದರ್ಶನದಲ್ಲಿ ರಾಮನಗರ ಜಿಲ್ಲೆಯು ಏರ್ಪಡಿಸಿದ್ದ ವಸ್ತು ಪ್ರದರ್ಶನವು ಮೂರನೇ ಸ್ಥಾನ ಪಡೆದಿದೆ.

ಚನ್ನಪಟ್ಟಣದ ಬೊಂಬೆ, ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ, ಭಕ್ತರ ಆರಾಧ್ಯ ದೇವತೆಯಾದ ಕಬ್ಬಾಳಮ್ಮನ ದೇವಸ್ಥಾನ, ರಣಹದ್ದು, ಪ್ರಸಿದ್ಧ ರೇಷ್ಮೆ, ರಾಮನಗರ ಮಾವು ಸೇರಿದಂತೆ ಜಿಲ್ಲೆಯ ವಿಶೇಷತೆಗಳನ್ನು ಒಳಗೊಂಡ ವಸ್ತು ಪ್ರದರ್ಶನವು ಜನರ ಮನಸೂರೆಗೊಂಡಿತ್ತು.

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಿಂದ ಮೈಸೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಿಕ್ಕ ಸುಬ್ಬಯ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ರಾಜೇಶ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಲವಂತ ರಾವ್ ಪಾಟೀಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT