ರಾಮನಗರ: ‘ಜಿಲ್ಲೆಯಲ್ಲಿ ನಿಯಮಬದ್ಧವಾಗಿ ನೂತನ ಬಡಾವಣೆ ನಿರ್ಮಾಣಕ್ಕೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಬಡಾವಣೆ ನಿರ್ಮಾಣಕ್ಕೆ ಅನುಮತಿ, ನೋಂದಣಿ, ನೀಲನಕ್ಷೆ ಅನುಮೋದನೆ ಹಾಗೂ ಖಾತೆ ಬದಲಾವಣೆ ಮಾಡಲು ಯಾವುದೇ ಅಡೆತಡೆಗಳಿರುವುದಿಲ್ಲ’ ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿತ್ಯಾಜ್ಯನ ಪತ್ರ, ಸೇಲ್ ಸರ್ಟಿಫಿಕೇಟ್, ಕೋರ್ಟ್ ಆದೇಶದಂತೆ ಇ– ಖಾತೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಲೇಔಟ್ ನಿರ್ಮಾಣ ಮಾಡುವಾಗ ಸಲ್ಲಿಸಿದ್ದ ನೀಲನಕ್ಷೆಯಂತೆ ಲೇಔಟ್ ನಿರ್ಮಿಸಬೇಕು. ನಿರ್ಮಾಣದ ಹಂತದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಬಡಾವಣೆಗಳು ಹಾಗೂ ಜಿಲ್ಲೆಯಲ್ಲಿ ಉಪ ಗ್ರಾಮವೆಂದು ಘೋಷಿಸಲು ಅರ್ಹವಿರುವ ಬಡಾವಣೆಗಳು ಮತ್ತು ಗ್ರಾಮ ಠಾಣೆಗಳನ್ನು ಉಪಗ್ರಾಮಗಳಾಗಿ ಬದಲಾಯಿಸಲು, ಸೂಕ್ತ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಸೂಚಿಸಿದರು.

‘ಗುಂಡುತೋಪು ಮತ್ತು ಅರಣ್ಯ ಪ್ರದೇಶಗಳಲ್ಲಿ ಮನೆಗಳನ್ನು ನಿರ್ಮಿಸಿದ್ದಲ್ಲಿ ಅವುಗಳಿಗೆ ಖಾತೆ ಮಾಡಿಕೊಡಲು ಬರುವುದಿಲ್ಲ. ಹಾಗಾಗಿ, ಅಲ್ಲಿರುವವರನ್ನು ಅನುಭವದಾರರೆಂದು ಪರಿಗಣಿಸಬೇಕು’ ಎಂದು ಸಲಹೆ ನೀಡಿದರು.

ಡೆವಲಪರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಮಾತನಾಡಿ, ‘ನಮಗೆ ಜಿಲ್ಲೆಯಲ್ಲಿ ಬಡಾವಣೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೋಂದಣಿ, ಅನುಮತಿ ಸೇರಿದಂತೆ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ’ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ವಿಭಾಗಾಧಿಕಾರಿ ಪಿ.ಕೆ. ಬಿನೋಯ್, ಜಿ.ಪಂ. ಉಪ ಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ಚಿಕ್ಕಸುಬ್ಬಯ್ಯ, ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ಹನುಮೇಗೌಡ, ತಹಶೀಲ್ದಾರುಗಳು, ತಾ.ಪಂ. ಕಾರ್ಯನಿರ್ವಾಕ ಅಧಿಕಾರಿ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸಲ್ಲಿಸಿರುವ ನೀಲನಕ್ಷೆಯಂತೆ ಲೇಔಟ್ ನಿರ್ಮಾಣ ಮಾಡಬೇಕು ನೀಲನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡಿದರೆ ಕಾನೂನು ಕ್ರಮ ಉಪಗ್ರಾಮವಾಗಿ ಬದಲಾಯಿಸಲು ದಾಖಲೆ ಸಲ್ಲಿಸಲು ಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.