ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ಮತದಾರರ ಪಟ್ಟಿಯಲ್ಲಿ ಲೋಪ: ಪರಿಶೀಲನೆಗೆ ಸೂಚನೆ

Last Updated 24 ಜೂನ್ 2020, 0:55 IST
ಅಕ್ಷರ ಗಾತ್ರ

ರಾಮನಗರ: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಯಲ್ಲಿ ಲೋಪಗಳು ಆಗಿದ್ದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ರಾಮನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚನ್ನಪಟ್ಟಣ ತಾಲ್ಲೂಕಿನ ಮತದಾರರ ಪಟ್ಟಿಯಲ್ಲಿ ವ್ಯತ್ಯಾಸ ಆಗಿರುವ ಕುರಿತು ಜೆಡಿಎಸ್‌ನ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್‌ ರಾಜ್ಯ ಚುನಾವಣಾ ಆಯೋಗ ಹಾಗೂ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಒಂದು ವಾರದ ಒಳಗೆ ವರದಿ ನೀಡುವಂತೆ ಆಯುಕ್ತರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಏನಿದೆ ದೂರಿನಲ್ಲಿ?: ರಂಗನಾಥ್‌ ಈಗಾಗಲೇ ಪರಿಷತ್‌ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿದ್ದಾರೆ.ಬಿಜೆಪಿಯಿಂದ ಅವರ ಎದುರಾಳಿಯಾಗಿರುವ ಹಾಲಿ ಸದಸ್ಯ ಪುಟ್ಟಣ್ಣ ಚನ್ನಪಟ್ಟಣದವರು. ‘ಚನ್ನಪಟ್ಟಣದಲ್ಲಿ ಶಿಕ್ಷಕರಲ್ಲದ ಕೆಲವರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಅವರನ್ನು ಪಟ್ಟಿಯಿಂದ ಕೈಬಿಡಬೇಕು. ಈ ಅಕ್ರಮ ನಡೆಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ರಂಗನಾಥ್‌ ಕಳೆದ ಮೇನಲ್ಲಿ ಚನ್ನಪಟ್ಟಣ ತಹಶೀಲ್ದಾರ್‌ ಹಾಗೂ ರಾಮನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

‘ದೂರು ನೀಡಿದ್ದಾಗ್ಯೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಚನ್ನಪಟ್ಟಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಕಲಿ ಮತದಾರರನ್ನು ಗುರುತಿಸುವ ಕೆಲಸ ಮಾಡಿಲ್ಲ. ಇದೇ ತಿಂಗಳ 12ರಂದು ನಾನು ಮತ್ತೊಮ್ಮೆ ನಕಲಿ ಮತದಾರರ ಹೆಸರಿನ ಸಮೇತವಾಗಿ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ನ್ಯಾಯಸಮ್ಮತ ಚುನಾವಣೆ ನಡೆಯುವ ಅನುಮಾನ ಮೂಡಿದೆ. ಕೂಡಲೇ ನಕಲಿ ಮತದಾರರನ್ನು ಪಟ್ಟಿಯಿಂದ ಕೈಬಿಡಬೇಕು. ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಅವರು ಮುಖ್ಯ ಚುನಾವಣಾ ಆಯುಕ್ತರು ಹಾಗೂ ಪ್ರಾದೇಶಿಕ ಆಯುಕ್ತರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT