ರಾಮನಗರ: ತಾಲ್ಲೂಕಿನ ಚನ್ನಮಾನಹಳ್ಳಿಯ ಶ್ರೀನಿವಾಸ್ (45) ಎಂಬುವರ ಶವ ಗ್ರಾಮದ ರೈಲು ಹಳಿ ಬಳಿ ಸೋಮವಾರ ಪತ್ತೆಯಾಗಿದೆ. ತಲೆಗೆ ಬಲವಾದ ಪೆಟ್ಟಾಗಿದ್ದು, ರೈಲಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಅನುಮಾನ ವ್ಯಕ್ತವಾಗಿದೆ.
ರಾಮನಗರದಲ್ಲಿ ರೇಷ್ಮೆ ನೂಲು ಬಿಚ್ಚುವ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸ ನಿರ್ವಹಿಸುತ್ತಿರುವ ಸ್ಥಳ ಗ್ರಾಮಕ್ಕೆ ಹತ್ತಿರವಿದ್ದ ಕಾರಣ ಪ್ರತಿದಿನ ರೈಲು ಹಳಿ ದಾಟಿಕೊಂಡು ನಡೆದು ಹೋಗುತ್ತಿದ್ದರು. ಈ ವೇಳೆ, ರೈಲು ಡಿಕ್ಕಿ ಹೊಡೆದಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಹಳಿ ಪಕ್ಕ ಬಿದ್ದಿದ್ದ ಅವರ ಶವವನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದರು.
ಶವದ ಮರಣೋತ್ತರ ಪರೀಕ್ಷೆ ನಡೆಸಿ, ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಘಟನೆ ಕುರಿತು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.