ಬುಧವಾರ, ಡಿಸೆಂಬರ್ 8, 2021
21 °C

dnp ಅಪಘಾತ: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ತಾಲ್ಲೂಕಿನ ಜೋಡುಗಟ್ಟೆ ಗೇಟ್‌ ತಿರುವಿನಲ್ಲಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆಕಾಂಕ್ಷಾ ಗುಪ್ತ (20) ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಎರಡು ಕಾರುಗಳಲ್ಲಿ ಸಾವನದುರ್ಗ ಪ್ರವಾಸಕ್ಕೆ ಬಂದಿದ್ದರು. ಮುಂಜಾನೆ 3.30ರ ಸುಮಾರಿಗೆ ಮಾಗಡಿ ಮಾರ್ಗವಾಗಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಜಮ್ಮು ಮೂಲದ ಆಕಾಂಕ್ಷಾ ಗುಪ್ತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಶಿಶ್‌ ರಾಜಾ, ದಿವ್ಯಾಂಶು, ಆಶುತೋಷ್‌, ದರ್ಶನ್‌, ಯಶೋವರ್ಧನ್‌ ಸಿಂಗ್‌, ಭವ್ಯಾ, ದಿವ್ಯಾಂಶ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕಾರು ಕಂಬಕ್ಕೆ ಡಿಕ್ಕಿ ಹೊಡೆದ ಕೂಡಲೇ ವಿದ್ಯುತ್‌ ಕಂಬ ಮೂರು ತುಂಡಾಗಿದೆ. ಕಂಬದ ಒಂದು ತುಂಡು ಆಕಾಂಕ್ಷಾ ಗುಪ್ತಾ ಅವರ ತಲೆಯ ಮೇಲೆ ಬಿದ್ದಿದೆ. ವಾಹನ ನಜ್ಜುಗುಜ್ಜಾಗಿದೆ. ಈ ಸಂಬಂಧ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.