ಬಿಡದಿ ತೋಟದಲ್ಲಿ ಗೋ ಪೂಜೆ ನೆರವೇರಿಸಿದ ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಶುಕ್ರವಾರ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಬಿಡದಿಯ ತೋಟದಲ್ಲಿ ಗೋ ಪೂಜೆ ನೆರವೇರಿಸಿದರು.
ಗೋ ಪೂಜೆ ಮಹತ್ವದ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.
ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ.
ಅದರಲ್ಲೂ ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋ ಪೂಜೆಯನ್ನು ಇಂದು ನೆರವೇರಿಸಲಾಯಿತು. ಮತ್ತೊಮ್ಮೆ ಎಲ್ಲರಿಗೂ ದೀಪಾವಳಿ ಶುಭಾಶಯಗಳು ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ ಶುಭ ಹಾರೈಸಿದ್ದಾರೆ.
ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ.1/2 pic.twitter.com/dID81LlhQj
— H D Kumaraswamy (@hd_kumaraswamy) November 5, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.