ಬುಧವಾರ, ಫೆಬ್ರವರಿ 19, 2020
25 °C

ದೇಗುಲಮಠದಲ್ಲಿ ಇಂದು ಮಹಾರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಇಲ್ಲಿನ ದೇಗುಲಮಠದಲ್ಲಿ ಶ್ರೀ ಆದಿ ನಿರ್ವಾಣ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವವು ಫೆ.9 ರಂದು ಮಠದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಸುತ್ತೂರು ಮಠದ ಶಿವ

ರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮಿ, ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು, ದೇಗುಲ ಮಠದ ಮುಮ್ಮಡಿ ನಿರ್ವಾಣಮಹಾಸ್ವಾಮಿ, ಬೇಲಿಮಠದ ಶಿವರುದ್ರ ಮಹಾಸ್ವಾಮಿ ಸಾನ್ನಿಧ್ಯ ವಹಿಸಲಿದ್ದಾರೆ.

ದೇಗುಲ ಮಠದ ಚನ್ನಬಸವಸ್ವಾಮಿ, ಮರಳೇಗವಿ ಮಠದ ಮುಮ್ಮಡಿ ಶಿವರುದ್ರಸ್ವಾಮಿ, ಶಿವಗಿರಿ ಕ್ಷೇತ್ರದ ಅನ್ನದಾನೇಶ್ವರನಾಥ ಸ್ವಾಮಿ ಸಮ್ಮುಖದಲ್ಲಿ ಜಾತ್ರಾ ಮಹಾರಥೋತ್ಸವ ನಡೆಯಲಿದೆ.

ವಸತಿ ಸಚಿವ ವಿ.ಸೋಮಣ್ಣ, ಶಾಸಕ ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ, ಸಂಸದ ಡಿ.ಕೆ.ಸುರೇಶ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸಂಗೀತ ನಿರ್ದೇಶಕ ಕೆ.ಎಂ.ಇಂದ್ರ ಸಾರಥ್ಯದಲ್ಲಿ ಕಡಬಗೆರೆ ಮುನಿರಾಜು ಮತ್ತು ತಂಡದವರು ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು