ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಪರಿಹಾರ ಧನ ಬಿಡುಗಡೆಗೆ ನಿಖಿಲ್‌ ಕುಮಾರಸ್ವಾಮಿ ಆಗ್ರಹ

Last Updated 6 ಜೂನ್ 2021, 5:21 IST
ಅಕ್ಷರ ಗಾತ್ರ

ಕನಕಪುರ: ‘ಕೋವಿಡ್‌ ಸೋಂಕು ತಡೆಯುವ ಹೋರಾಟದಲ್ಲಿ ಸಾವನ್ನು ಲೆಕ್ಕಿಸದೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಭರವಸೆ ಕೊಟ್ಟರೆ ಸಾಲದು. ಪರಿಹಾರ ಘೋಷಣೆಯ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು’ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಒತ್ತಾಯಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಧನದ ಚೆಕ್‌ ಮತ್ತು ಕೋವಿಡ್‌ ಕಿಟ್‌ ವಿತರಿಸಿ ಅವರು
ಮಾತನಾಡಿದರು.

ತಪ್ಪುಭಾವನೆಯಿಂದ ಸೋಂಕಿತರ ಹತ್ತಿರ ಹೋಗಲು ಜನರು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಸೋಂಕು ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಬಂದಿದ್ದು 15 ಮಂದಿಗೆ ಇನ್ನು ಕೊಟ್ಟಿಲ್ಲ ಎಂದು ದೂರಿದರು.

ಹಾರೋಹಳ್ಳಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಮೂಲಸೌಕರ್ಯ ಕೊರತೆ ಇರುವುದಾಗಿ ವೈದ್ಯರು ತಿಳಿಸಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಅವಶ್ಯ ಹಾಗೂ ಅಗತ್ಯವಿರುವ ಯಂತ್ರೋಪಕರಣ, ಹಾಸಿಗೆ ಮತ್ತಿತರ ವಸ್ತುಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ. ನಂದಿನಿ, ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿ ವ್ಯಾಪ್ತಿಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT