ಅಪರಿಚಿತ ಶವಗಳನ್ನು ಹೂತಿರುವ ಆರೋಪದ ಮೇಲೆ ಧರ್ಮಸ್ಥಳದ ಸುತ್ತ ನಡೆಯುತ್ತಿರುವ ಶವ ಶೋಧವು ಕ್ಷೇತ್ರದ ವಿರುದ್ಧದ ಷಡ್ಯಂತ್ರವಾಗಿದೆ. ಇದಕ್ಕೆ ನ್ಯಾಯಾಂಗ ಮತ್ತು ಶಾಸಕಾಂಗ ಉತ್ತರ ನೀಡಬೇಕು
ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ದಾಸೋಹ ಮಠ ಅವ್ವೇರಹಳ್ಳಿ
ಕಾಣದ ಕೈಗಳು ಧರ್ಮಸ್ಥಳದ ವಿರುದ್ಧ ಪಿತೂರಿಯಲ್ಲಿ ತೊಡಗಿವೆ. ಸುಳ್ಳು ಸುದ್ದಿ ಬಿತ್ತರಿಸಿ ಪ್ರಚಾರ ಪಡೆಯುತ್ತಿವೆ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕಾಣದ ಕೈಗಳ ಬಂಡವಾಳ ಬಯಲು ಮಾಡಬೇಕು
ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಬೇವೂರು
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣಾಭಿವೃದ್ಧಿಗೆ ಜಾತಿ ಮತ್ತು ಧರ್ಮ ಬೇಧವಿಲ್ಲದೆ ಶ್ರಮಿಸುತ್ತಿದ್ದಾರೆ. ಅವರ ವಿರುದ್ಧ ಎಡಪಂಥೀಯರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಸುಳ್ಳಿನ ವಿರುದ್ಧ ಸತ್ಯಕ್ಕೆ ಜಯ ಸಿಗಲಿದೆ
ಶಿವರುದ್ರ ಸ್ವಾಮೀಜಿ ವಿರಕ್ತ ಮಠಾಧ್ಯಕ್ಷ ಕುಡಿನೀರುಕಟ್ಟೆ
- ಕೆಲ ಯೂಟ್ಯೂಬರ್‌ಗಳು ಧರ್ಮಸ್ಥಳದ ಹೆಸರಿಗೆ ಕಳಂಕ ತರುತ್ತಿದ್ದಾರೆ. ಸರ್ಕಾರ ರಚಿಸಿರುವ ಎಸ್ಐಟಿ ಪಾರದರ್ಶಕವಾಗಿ ತನಿಖೆ ನಡೆಸಿ ಸತ್ಯವನ್ನು ಜಗತ್ತಿಗೆ ಸಾರಲಿ. ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ