ಶನಿವಾರ, ಸೆಪ್ಟೆಂಬರ್ 18, 2021
22 °C

ಪಿತೃ ಪೂಜೆ ನೆರವೇರಿಸಿದ ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅವರು ತಾಲ್ಲೂಕಿನ ದೊಡ್ಡಾಲಹಳ್ಳಿಯಲ್ಲಿ ತಮ್ಮ ತಂದೆ ಕೆಂಪೇಗೌಡರ ಸಮಾಧಿಗೆ ಶುಕ್ರವಾರ ಪಿತೃ ಪೂಜೆ ನೆರವೇರಿಸಿದರು.

ಪ್ರತಿವ‍ರ್ಷ ಗೌರಿ, ಗಣೇಶ ಹಬ್ಬದ ಸಮಯದಲ್ಲಿ ಪಿತೃ ಪೂಜೆ ನೆರವೇರಿಸಿಕೊಂಡು ಬಂದಿರುವ ಅವರು, ತಾಯಿ ಗೌರಮ್ಮ ಅವರೊಂದಿಗೆ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದರು.

 ಡಿ.ಕೆ. ಶಿವಕುಮಾರ್‌ ಅವರ ಪತ್ನಿ ಉಷಾ ಶಿವಕುಮಾರ್‌ ಹಾಗೂ ಮಕ್ಕಳು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.