ಗುರುವಾರ , ಜೂನ್ 17, 2021
22 °C

ಆಸ್ಪತ್ರೆಗಳಿಗೆ ಡಿಸಿಎಂ ಭೇಟಿ ಆಡಳಿತ ಮಂಡಳಿ ಜೊತೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಕೆಂಗೇರಿಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆ ಹಾಗೂ ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಆಸ್ಪತ್ರೆಗಳ ಆಡಳಿತ ಮಂಡಳಿ ಜೊತೆ ಮಾತನಾಡಿದ ಸಚಿವರು, ಕೋವಿಡ್ ಸೋಂಕಿತರಿಗೆ ಇನ್ನಷ್ಟು ಉತ್ತಮ ಚಿಕಿತ್ಸೆ ನೀಡಬೇಕು. ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ರಾಕೇಶ್‌ಕುಮಾರ್, ಜಿ.ಪಂ. ಸಿಇಒ ಇಕ್ರಂ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌ ಜೊತೆಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು