ಸೋಮವಾರ, ಆಗಸ್ಟ್ 8, 2022
24 °C

ಪರಿಹಾರ ಚೆಕ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ನಗರದಲ್ಲಿ ಈಚೆಗೆ ಮ್ಯಾನ್‌ಹೋಲ್‌ನಲ್ಲಿ ಬಿದ್ದು ಮೃತಪಟ್ಟ ರಮೇಶ್ ಎಂಬ ವ್ಯಕ್ತಿಯ ಕುಟುಂಬದವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ₹ 10 ಲಕ್ಷದ ಚೆಕ್‌ ವಿತರಿಸಿದರು.

ರಮೇಶ್ ಅವರ ಪತ್ನಿಗೆ ₹ 2.5 ಲಕ್ಷ, ತಾಯಿಗೆ ₹ 2.5 ಲಕ್ಷ ಹಾಗೂ ಅವರ ಮಗಳ ಹೆಸರಿನಲ್ಲಿ ₹ 5 ಲಕ್ಷ ನಿಶ್ಚಿತ ಠೇವಣಿ ಮಾಡಲಾಗಿದೆ. ಮಗಳು ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಹಣ ಪಡೆಯಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ
ರಾಮನಗರ ನಗರಸಭೆ ಪೌರಾಯುಕ್ತ ನಂದಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಲಲಿತಾ
ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.