ಬಿಡದಿ (ರಾಮನಗರ): ಪಟ್ಟಣದ ಬಿಡದಿಯ ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಬುಧವಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಅವರು, ಪರೀಕ್ಷಾ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಪರೀಕ್ಷೆಗೆ ಶುಭ ಕೋರಿದರು.

ಬಳಿಕ ಮಾತನಾಡಿದ ಅವರು, ‘ನಾನು ಸಹ ವಿದ್ಯಾರ್ಥಿ ದೆಸೆಯಲ್ಲಿ ಹಲವು ಕೊರತೆಗಳ ನಡುವೆಯೇ ಪರೀಕ್ಷೆ ಬರೆದಿದ್ದೆ. ಅಂತಹ ಸ್ಥಿತಿ ಈಗಿನ ವಿದ್ಯಾರ್ಥಿಗಳಿಗೆ ಬರಬಾರದೆಂಬ ಕಾರಣಕ್ಕೆ ಬಿಡದಿ ಹೋಬಳಿಯ 21 ಪ್ರೌಢಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅಗತ್ಯವಿರುವ ಲೇಖನ ಸಾಮಗ್ರಿಗಳನ್ನು ವಿತರಿಸಿದ್ದೇನೆ’ ಎಂದರು.

‘ಮಕ್ಕಳು ಪರೀಕ್ಷೆ ಕುರಿತು ಯಾವುದೇ ಭಯ ಮತ್ತು ಆತಂಕವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಎಸ್ಎಸ್ಎಲ್ಸಿ ಪ್ರಮುಖ ಘಟ್ಟವಾಗಿರುವುದರಿಂದ, ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ತಮ್ಮ ತಂದೆ–ತಾಯಿ, ಶಾಲೆ ಹಾಗೂ ಕಲಿಸಿದ ಗುರುಗಳಿಗೆ ಕೀರ್ತಿ ತರಬೇಕು. ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಿ ಹೆತ್ತವರ ಕನಸನ್ನು ನನಸು ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸೋಮಲಿಂಗಯ್ಯ ಮಾತನಾಡಿ, ‘ಪರೀಕ್ಷೆಗೆ ಸಂಬಂಧಿಸಿದಂತೆ ಇಲಾಖೆಯ 20 ಅಂಶಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಿದೆ. ಪರೀಕ್ಷಾ ಭಯ ನಿವಾರಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಲು ಪ್ರೇರಣಾ ಕಾರ್ಯಾಗಾರಗಳನ್ನು ಆಯೋಜಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕೊಡಿಸಲಾಗಿದೆ’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಎಸ್ಎಸ್ಎಲ್ಸಿಯಲ್ಲಿ ಪಡೆಯುವ ಅಂಕಗಳು ಅಡಿಪಾಯವಾಗುತ್ತವೆ. ಹಾಗಾಗಿ, ವಿಷಯವನ್ನು ಚನ್ನಾಗಿ ಮನನ ಮಾಡಿಕೊಂಡು ಒತ್ತಡಕ್ಕೆ ಒಳಗಾಗದೆ ಶಾಂತಚಿತ್ತರಾಗಿ ಪರೀಕ್ಷೆ ಎದುರಿಸಬೇಕು. ಈ ಬಾರಿ ಜಿಲ್ಲೆಗೆ ಉತ್ತಮ ಫಲಿತಾಂಶ ತಂದು ಕೊಡಬೇಕು’ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ಗಿರೀಶ್, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಜಿ. ಶಿವಣ್ಣ, ಬನ್ನಿಕುಪ್ಪೆ(ಬಿ) ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಚಿಕ್ಕವೀರಯ್ಯ, ಶಿಕ್ಷಕರು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.